AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಿದ್ದರು.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ
ಬೋರಿಸ್ ಜಾನ್ಸನ್
shruti hegde
| Edited By: |

Updated on: Dec 02, 2020 | 6:53 PM

Share

ನವದೆಹಲಿ: 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಇಂಗ್ಲೆಂಡ್​ ಪ್ರಧಾನಮಂತ್ರಿ ಬೋರಿಸ್​ ಜಾನ್ಸನ್​​ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ.

ಇಂಗ್ಲೆಂಡ್​ ಪ್ರಧಾನಿ ಭಾರತದ ಗಣರಾಜ್ಯೋತ್ಸವ ಪೆರೇಡ್​ಗೆ ಅತಿಥಿ ಆಗಿ ಆಗಮಿಸಿದ್ದು 1993ರಲ್ಲೇ ಕೊನೆ. ಈಗ 27 ವರ್ಷಗಳ ನಂತರ ಬ್ರಿಟನ್​ ಪ್ರಧಾನಿಗೆ ಆಹ್ವಾನ ನೀಡಲಾಗಿದೆ. ಬೋರಿಸ್​ ಜಾನ್ಸನ್​ ಭಾರತದ ಆಮಂತ್ರಣ ಸ್ವೀಕರಿಸಿದರೆ ಮುಂದಿನ ವರ್ಷದ ಗಣಾರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಆಗಲಿದ್ದಾರೆ. ನವೆಂಬರ್ 27ರಂದು ಮೋದಿ ಹಾಗೂ ಬೋರಿಸ್​ ಜಾನ್ಸನ್​ ದೂರವಾಣಿ ಮೂಲಕ ಮಾತನಾಡಿದ್ದಾರಂತೆ. ಈ ವೇಳೆ ಮೋದಿ ಔಪಚಾರಿಕವಾಗಿ ಬ್ರಿಟನ್​ ಪ್ರಧಾನಿಯನ್ನು ಆಹ್ವಾನಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಬ್ರಿಟಿಷ್​ ರಾಯಭಾರಿ ಕಚೇರಿ ಅಧಿಕಾರಿಗಳು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ಸಭೆಯಲ್ಲಿ  ಎರಡೂ ದೇಶಗಳು ಆಮದು-ರಫ್ತಿನ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ.

ಈ ಭೇಟಿ ಮುಖ್ಯವೇಕೆ?: ಭಾರತ ಹಾಗೂ ಬ್ರಿಟನ್​ ಸಂಬಂಧ ಈ ಮೊದಲಿನಿಂದಲೂ ಉತ್ತಮವಾಗಿದೆ. ಒಂದೊಮ್ಮೆ ಬೋರಿಸ್​ ಜಾನ್ಸನ್ ಈ ಬಾರಿ ಭಾರತಕ್ಕೆ ಭೇಟಿ ನೀಡಿದರೆ ಎರಡೂ ರಾಷ್ಟ್ರಗಳ ಸಂಬಂಧ ಮತ್ತಷ್ಟು ಉತ್ತಮಗೊಳ್ಳಲಿದೆ. ಅಷ್ಟೇ ಅಲ್ಲ, ಸಾಕಷ್ಟು ಒಪ್ಪಂದಗಳು ಕೂಡ ನಡೆಯುವ ಸಾಧ್ಯತೆಗಳಿರುತ್ತವೆ. ಹೀಗಾಗಿ, ಈ ಭೇಟಿ ತುಂಬಾನೇ ಪ್ರಮುಖವಾಗಲಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಈಗ ಅತಿ ದೀರ್ಘಾವಧಿಯ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ!

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ