ನವದೆಹಲಿ: ಭಾರತದಲ್ಲಿ ವ್ಯಾಸಂಗ ಮಾಡಲು ವೀಸಾ (Visa) ನೀಡಬೇಕೆಂದು ಅಫ್ಘಾನಿಸ್ತಾನದ (Afghanistan) ಕಾಲೇಜು ವಿದ್ಯಾರ್ಥಿನಿ ಫಾತಿಮಾ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಮನವಿ ಮಾಡಿದ್ದಾರೆ. ನಾನು ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ. ಭಾರತದಲ್ಲಿ ಶಿಕ್ಷಣ ಪಡೆಯಲು ನನಗೆ ವಿದ್ಯಾರ್ಥಿವೇತನವನ್ನು ನೀಡುವಂತೆ ಭಾರತದ ಪ್ರಧಾನಿಗೆ ಮನವಿ ಮಾಡುತ್ತೇನೆ. ನಾವು ಭಾರತವನ್ನು ಪ್ರೀತಿಸುತ್ತೇವೆ ಭಾರತ ಕೂಡ ನಮ್ಮ ಕುಟುಂಬದಂತೆ ಎಂದು ಆಕೆ ಹೇಳಿದ್ದಾರೆ.
ಅಫ್ಘಾನ್ ವಿದ್ಯಾರ್ಥಿಗಳು ಭಾರತದಲ್ಲಿ ಅಧ್ಯಯನ ಮಾಡಲು ವೀಸಾಗಳಿಗಾಗಿ ಕಾಯುತ್ತಿದ್ದಾರೆ. ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ವೀಸಾ ಲಭ್ಯವಿಲ್ಲದ ಕಾರಣ ಅವರಿಗೆ ತಮ್ಮ ಅಧ್ಯಯನವನ್ನು ಮಾಡಲು ಸಾಧ್ಯವಾಗುತ್ತಿಲ್ಲ.
ಇದನ್ನೂ ಓದಿ: ಕುರಾನ್ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್
ತಾಲಿಬಾನ್ ಅಫ್ಘಾನಿಸ್ತಾನಕ್ಕೆ ಪ್ರವೇಶಿಸಿದ ನಂತರ ಭಾರತೀಯ ಸಂಸ್ಥೆಗಳಿಗೆ ದಾಖಲಾದ ಆಫ್ಘನ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ವೀಸಾಗಳ ವಿತರಣೆಗಾಗಿ ಕಾಯುತ್ತಿದ್ದಾರೆ. 2022ರ ಮೇ ತಿಂಗಳಲ್ಲಿ ವಿದ್ಯಾರ್ಥಿಗಳು ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು. ಇ-ವೀಸಾಗಳನ್ನು ಶೀಘ್ರವಾಗಿ ನೀಡುವಂತೆ ಭಾರತ ಸರ್ಕಾರವನ್ನು ವಿನಂತಿಸಿದ್ದರು.
Published On - 1:58 pm, Sat, 20 August 22