PM Modi: ಉಕ್ರೇನ್‌ನಲ್ಲಿ ಶಾಂತಿ ಮರುಸ್ಥಾಪಿಸಲು ಇತರೆ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಭಾರತ ಸಿದ್ಧ; ಪ್ರಧಾನಿ ಮೋದಿ

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಘರ್ಷಣೆಗಳು "ನಮ್ಮೆಲ್ಲರಿಗೂ ಆಳವಾದ ಕಾಳಜಿಯ ವಿಷಯವಾಗಿದೆ" ಎಂದು ವಾರ್ಸಾದಲ್ಲಿ ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗಿನ ಮಾತುಕತೆಯ ನಂತರ ಮಾಧ್ಯಮ ಸಂವಾದದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

PM Modi: ಉಕ್ರೇನ್‌ನಲ್ಲಿ ಶಾಂತಿ ಮರುಸ್ಥಾಪಿಸಲು ಇತರೆ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಭಾರತ ಸಿದ್ಧ; ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: Aug 22, 2024 | 10:45 PM

ನವದೆಹಲಿ: ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರುಸ್ಥಾಪನೆಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಭಾರತವು ಸ್ನೇಹಪರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಘರ್ಷಣೆಗಳು “ನಮ್ಮೆಲ್ಲರಿಗೂ ಆಳವಾದ ಕಾಳಜಿಯ ವಿಷಯವಾಗಿದೆ” ಎಂದು ವಾರ್ಸಾದಲ್ಲಿ ತನ್ನ ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗೆ ಮಾತುಕತೆಯ ನಂತರ ಮಾಧ್ಯಮ ಸಂವಾದದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ರಷ್ಯಾ ಮತ್ತು ಉಕ್ರೇನ್ ಅನ್ನು ಸಂಧಾನಕ್ಕೆ ತರುವಲ್ಲಿ ಭಾರತವು ಯಾವುದಾದರೂ ಪಾತ್ರವನ್ನು ವಹಿಸಬಹುದೆಂದು ನಿಕಟವಾಗಿ ವೀಕ್ಷಿಸುತ್ತಿರುವ ಕೈವ್‌ಗೆ ಮೋದಿ ನಾಳೆ ಭೇಟಿ ನೀಡುತ್ತಿದ್ದಾರೆ. ಅದರ ಒಂದು ದಿನ ಮುಂಚಿತವಾಗಿ ಮೋದಿಯವರ ಈ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: Mamata Banerjee: ಅತ್ಯಾಚಾರ ವಿರೋಧಿ ಕಾನೂನನ್ನು ಕಠಿಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ

ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎಂಬುದು ಭಾರತದ ದೃಢವಾದ ನಂಬಿಕೆಯಾಗಿದೆ. ಯಾವುದೇ ಬಿಕ್ಕಟ್ಟಿನಲ್ಲಿ, ಮುಗ್ಧ ಜನರ ಪ್ರಾಣಹಾನಿ ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ನಾವು ಸಂಭಾಷಣೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ. ಇದಕ್ಕಾಗಿ ಭಾರತವು ಸ್ನೇಹಪರ ರಾಷ್ಟ್ರಗಳೊಂದಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್