AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ಆತಂಕ: ವಿದೇಶದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಮೋದಿ ಸರ್ಕಾರ

ಚೀನಾದಲ್ಲಿ ಮತ್ತೆ ಕೊರೊನಾ ಹಾವಳಿ ಜೋರಾಗಿದೆ. ಕೊರೊನಾ ಉಪತಳಿಯು ಬಹು ವೇಗವಾಗಿ ದೇಶಾದ್ಯಂತ ಹರಡುತ್ತಿರುವುದು ವಿಶ್ವಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇತ್ತ ಭಾರತದಲ್ಲೂ ಸಹ ವಿದೇಶದಿಂದ ಆಗಮಿಸುವವರಿಗೆ ಹೊಸ ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದೆ.

ಕೊರೋನಾ ಆತಂಕ: ವಿದೇಶದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಮೋದಿ ಸರ್ಕಾರ
ಪ್ರಾತಿನಿಧಿಕ ಚಿತ್ರImage Credit source: PTI
TV9 Web
| Edited By: |

Updated on: Dec 22, 2022 | 11:11 PM

Share

ನವದೆಹಲಿ: ಪ್ರಪಂಚದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು (Covid-19) ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದು, ಇದೀಗ ಕೇಂದ್ರ ಸರ್ಕಾರ ವಿದೇಶದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ (guidelines) ಪ್ರಕಟಿಸಿದೆ.

ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ, ಕೋವಿಡ್ ಪರೀಕ್ಷೆ ಹೆಚ್ಚಿಸಲು ಸೂಚನೆ: ಕೋವಿಡ್ ಪರಿಸ್ಥಿತಿ ಪರಿಶೀಲನೆ ಸಭೆಯಲ್ಲಿ ಮೋದಿ

ಮೋದಿ ಸಭೆ ನಂತರ ಕೇಂದ್ರ ಆರೋಗ್ಯ ಇಲಾಖೆ ವಿದೇಶದಿಂದ ಆಗಮಿಸುವವರಿಗೆ ಹೊಸ ಗೈಡ್‌ಲೈನ್ಸ್‌ ರಿಲೀಸ್‌ ಮಾಡಿದ್ದು, ಡಿಸೆಂಬರ್‌ 24ರಿಂದ ಅನ್ವಯವಾಗಲಿದೆ.

ವಿದೇಶದಿಂದ ಆಗಮಿಸುವವರಿಗೆ ಹೊಸ ಗೈಡ್‌ಲೈನ್ಸ್‌

* ವಿದೇಶದಿಂದ ಬರುವವರು ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು

* ಏರ್‌ಪೋರ್ಟ್‌ಗಳಲ್ಲಿ ಮಾಸ್ಕ್‌ ಹಾಗೂ ದೈಹಿಕ ಅಂತರ ಪಾಲಿಸಬೇಕು

* ಏರ್‌ಪೋರ್ಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ

*ಕೊವಿಡ್ ಗುಣಲಕ್ಷಣ ಕಂಡುಬಂದ್ರೆ ಐಸೋಲೇಷನ್ ಕಡ್ಡಾಯ

* ಇನ್ಮುಂದೆ ಏರ್‌ಪೋರ್ಟ್‌ಗಳಲ್ಲಿ ಱಂಡಮ್‌ ಟೆಸ್ಟ್‌ ಕಡ್ಡಾಯ

* ಪಾಸಿಟಿವ್ ಬಂದ್ರೆ ಜಿನೋಮಿಕ್ ಸೀಕ್ವೆನ್ಸ್‌ ಕಡ್ಡಾಯ

* 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಟೆಸ್ಟ್‌ ಅಗತ್ಯವಿಲ್ಲ

* 12 ವರ್ಷದೊಳಗಿನವರಿಗೆ ಸೋಂಕಾದ್ರೆ ಮನೆಯಲ್ಲೇ ಐಸೋಲೇಷನ್‌

ಸಭೆಯಲ್ಲಿ ಮೋದಿ ಸಲಹೆ

ಸೋಂಕು ನಿರ್ವಹಣೆಗೆ ಕಟ್ಟುನಿಟ್ಟಾದ ನಿಗಾ ವಹಿಸುವಂತೆ ಸಭೆಯಲ್ಲಿ ಮೋದಿ ಸಲಹೆ ನೀಡಿದ್ದಾರೆ. ಜನದಟ್ಟಣೆಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಗೆ ಜನರನ್ನು ಒತ್ತಾಯಿಸಬೇಕು, ಕೋವಿಡ್-19 ಪರೀಕ್ಷೆ ಮತ್ತು ಜಿನೋಮಿಕ್ ಸಿಕ್ವೆನ್ಸಿಂಗ್ ಹೆಚ್ಚಿಸಬೇಕು, ವೃದ್ಧರು ಹಾಗೂ ದುರ್ಬಲ ಜನರು ಮುನ್ನೆಚ್ಚರಿಕೆ ಡೋಸ್ ಪಡೆಯುವಂತೆ ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಕೊರೊನಾ ಭೀತಿ: ಹೊಸದಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಆಕ್ಸಿಜನ್ ಸಿಲಿಂಡರ್‌ಗಳು, ಪಿಎಸ್‌ಎ ಪ್ಲಾಂಟ್‌ಗಳು, ವೆಂಟಿಲೇಟರ್‌ಗಳು ಮತ್ತು ಮಾನವ ಸಂಪನ್ಮೂಲ ಸೇರಿದಂತೆ ಆಸ್ಪತ್ರೆಯ ಮೂಲಸೌಕರ್ಯಗಳ ಕಾರ್ಯಾಚರಣೆಯ ಸಿದ್ಧತೆ ಖಚಿತಪಡಿಸಿಕೊಳ್ಳಲು ಕೋವಿಡ್ ನಿರ್ದಿಷ್ಟ ಸೌಲಭ್ಯಗಳನ್ನು ಲೆಕ್ಕಪರಿಶೋಧಿಸಲು ರಾಜ್ಯಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ