ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ
ಕಾಡು ಪ್ರಾಣಿಗಳ ರಕ್ಷಣೆಗೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದೆ. ಅದರ ಪರಿಣಾಮವಾಗಿ ಚಿರತೆ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯ ಪಟ್ಟಿದೆ.
ನವದೆಹಲಿ: ಭಾರತದಲ್ಲಿ ಚಿರತೆ ಸಂಖ್ಯೆ ಹೆಚ್ಚಾಗಿದೆ. ಒಂದೇ ವರ್ಷದಲ್ಲಿ ಶೇ 60ರಷ್ಟು ಹೆಚ್ಚಳ ದಾಖಲಿಸಿರುವ ವರದಿ ಅಚ್ಚರಿ ಮೂಡಿಸಿದೆ. ರಾಜ್ಯವಾರು ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ವಿಶೇಷ.
ಈ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಭಾರತದಲ್ಲಿ ಸದ್ಯ, 12,852 ಚಿರತೆಗಳಿವೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ. 3,421 ಚಿರತೆಗಳಿರುವ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 1,783 ಚಿರತೆಗಳಿವೆ. ಮೂರನೇ ಸ್ಥಾನದಲ್ಲಿ ಮಹಾರಾಷ್ಟ್ರ (1690) ಇದೆ.
Released the “Status of Leopard in India 2018” report.
Happy to announce that, India now has 12,852 leopards. More than 60% increase in population has been recorded over the previous estimate which was conducted in 2014. pic.twitter.com/k6I3o0Kg9h
— Prakash Javadekar (@PrakashJavdekar) December 21, 2020
ಕಾಡು ಪ್ರಾಣಿಗಳ ರಕ್ಷಣೆಗೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದೆ. ಅದರ ಪರಿಣಾಮವಾಗಿ ಚಿರತೆ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ದಖನ್ ಪ್ರಸ್ಥಭೂಮಿ, ಶಿವಾಲಿಕ್ ಪರ್ವತಗಳು, ತೆರೈ ಪ್ರದೇಶ, ಪಶ್ಚಿಮ ಘಟ್ಟದಲ್ಲಿ ಚಿರತೆಗಳು ಹೆಚ್ಚು ಕಂಡು ಬಂದಿವೆ.
Published On - 8:37 pm, Mon, 21 December 20