ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ

ಕಾಡು ಪ್ರಾಣಿಗಳ ರಕ್ಷಣೆಗೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದೆ. ಅದರ ಪರಿಣಾಮವಾಗಿ ಚಿರತೆ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯ ಪಟ್ಟಿದೆ.

ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ
ಚಿರತೆ
Edited By:

Updated on: Dec 21, 2020 | 8:38 PM

ನವದೆಹಲಿ: ಭಾರತದಲ್ಲಿ ಚಿರತೆ ಸಂಖ್ಯೆ ಹೆಚ್ಚಾಗಿದೆ. ಒಂದೇ ವರ್ಷದಲ್ಲಿ ಶೇ 60ರಷ್ಟು ಹೆಚ್ಚಳ ದಾಖಲಿಸಿರುವ ವರದಿ ಅಚ್ಚರಿ ಮೂಡಿಸಿದೆ. ರಾಜ್ಯವಾರು ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ವಿಶೇಷ.

ಈ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಭಾರತದಲ್ಲಿ ಸದ್ಯ, 12,852 ಚಿರತೆಗಳಿವೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್​ ಜಾವಡೇಕರ್ ತಿಳಿಸಿದ್ದಾರೆ. 3,421 ಚಿರತೆಗಳಿರುವ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 1,783 ಚಿರತೆಗಳಿವೆ. ಮೂರನೇ ಸ್ಥಾನದಲ್ಲಿ ಮಹಾರಾಷ್ಟ್ರ (1690) ಇದೆ.

ಕಾಡು ಪ್ರಾಣಿಗಳ ರಕ್ಷಣೆಗೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದೆ. ಅದರ ಪರಿಣಾಮವಾಗಿ ಚಿರತೆ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ದಖನ್ ಪ್ರಸ್ಥಭೂಮಿ, ಶಿವಾಲಿಕ್ ಪರ್ವತಗಳು, ತೆರೈ ಪ್ರದೇಶ, ಪಶ್ಚಿಮ ಘಟ್ಟದಲ್ಲಿ ಚಿರತೆಗಳು ಹೆಚ್ಚು ಕಂಡು ಬಂದಿವೆ.

Published On - 8:37 pm, Mon, 21 December 20

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us