ದೇಶದಲ್ಲಿ ನಿನ್ನೆಗಿಂತಲೂ ಇಂದು ಹೆಚ್ಚು ಕೊರೊನಾ ಪ್ರಕರಣಗಳು ದಾಖಲು; 55 ಮಂದಿ ಸಾವು, ಸಕ್ರಿಯ ಕೇಸ್​​ಗಳು 19,719

ದೇಶದಲ್ಲಿ ಪಾಸಿಟಿವಿಟಿ ರೇಟ್​ ಶೇ.98.74ರಷ್ಟಿದ್ದು, ಕಳೆದ 24ಗಂಟೆಯಲ್ಲಿ 3010 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಅಲ್ಲಿಗೆ ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,47,699 ಕ್ಕೆ ಏರಿದೆ. 

ದೇಶದಲ್ಲಿ ನಿನ್ನೆಗಿಂತಲೂ ಇಂದು ಹೆಚ್ಚು ಕೊರೊನಾ ಪ್ರಕರಣಗಳು ದಾಖಲು; 55 ಮಂದಿ ಸಾವು, ಸಕ್ರಿಯ ಕೇಸ್​​ಗಳು 19,719
ಕೊವಿಡ್-19
Follow us
TV9 Web
| Updated By: Lakshmi Hegde

Updated on:May 05, 2022 | 10:12 AM

ಭಾರತದಲ್ಲಿ ಪ್ರತಿದಿನ ದಾಖಲಾಗುವ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಕಳೆದ 24ಗಂಟೆಯಲ್ಲಿ3,275 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಹಾಗೇ, 55 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ನಿನ್ನೆ 31 ಇದ್ದಿದ್ದು ಇವತ್ತು 55ಕ್ಕೆ ಏರಿಕೆಯಾಗಿದೆ. ಹೀಗೆ ಒಟ್ಟಾರೆ ದಾಖಲಾಗುವ ಕೊರೊನಾ ಕೇಸ್​​ನಲ್ಲಿ ಶೇ.82ರಷ್ಟು ಪ್ರಕರಣಗಳು ದಾಖಲಾಗಿದ್ದು ಐದು ರಾಜ್ಯಗಳಿಂದ. ಹಾಗೇ, ಭಾರತದಲ್ಲಿ ಈಗ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 4,30,91,393. ದೇಶದಲ್ಲಿ ಕೊವಿಡ್​ 19 ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,23,975.  24 ತಾಸುಗಳಲ್ಲಿ ಅತಿಹೆಚ್ಚು ಕೊರೊನಾ ಸೋಂಕಿನ ಸಂಖ್ಯೆ ದಾಖಲಾಗಿದ್ದು ದೆಹಲಿಯಿಂದ. ಇಲ್ಲಿ 1354 ಕೊರೊನಾ ಪ್ರಕರಣಗಳು ದಾಖಲಾಗಿವೆ. ಹರ್ಯಾಣದಲ್ಲಿ 571, ಕೇರಳದಲ್ಲಿ 386, ಉತ್ತರ ಪ್ರದೇಶದಲ್ಲಿ 198 ಕೇಸ್​​ಗಳು ಮತ್ತು ಮಹಾರಾಷ್ಟ್ರದಲ್ಲಿ 188 ಕೇಸ್​​ಗಳು ದಾಖಲಾಗಿವೆ. ಹಾಗೇ 24ಗಂಟೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 210 ಹೆಚ್ಚಾಗಿದ್ದು, ಒಟ್ಟು ಸಕ್ರಿಯ ಪ್ರಕಣಗಳು 19,719.

ಇನ್ನು ದೇಶದಲ್ಲಿ ಪಾಸಿಟಿವಿಟಿ ರೇಟ್​ ಶೇ.98.74ರಷ್ಟಿದ್ದು, ಕಳೆದ 24ಗಂಟೆಯಲ್ಲಿ 3010 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಅಲ್ಲಿಗೆ ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,47,699 ಕ್ಕೆ ಏರಿದೆ.  ಇದರೊಂದಿಗೆ ಲಸಿಕೆ ಅಭಿಯಾನ ಕೂಡ ವೇಗವಾಗಿ ನಡೆಯುತ್ತಿದೆ. ಕಳೆದ 24ಗಂಟೆಯಲ್ಲಿ 13,98,710 ಡೋಸ್​ ಲಸಿಕೆ ನೀಡಲಾಗಿದೆ ಮತ್ತು 3,27,327 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.

60 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್​ ಪಂಜಾಬ್​ನ ಪಟಿಯಾಲಾದಲ್ಲಿರುವ ರಾಜೀವ್ ಗಾಂಧಿ ನ್ಯಾಶನಲ್​ ಕಾನೂನು ಯೂನಿವರ್ಸಿಟಿಯಲ್ಲಿ  (RGNUL) 60 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟ ಬೆನ್ನಲ್ಲೇ ಅದನ್ನು ಕಂಟೇನ್ಮೆಂಟ್ ಝೋನ್​ ಎಂದು ಗುರುತಿಸಲಾಗಿದೆ. ಈ 60 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದರೂ ಎಲ್ಲರಲ್ಲೂ ಲಕ್ಷಣಗಳು ಇಲ್ಲ. ಯಾರಲ್ಲಿ ಕೊರೊನಾ ಲಕ್ಷಣಗಳು ಇವೆಯೋ ಅವರನ್ನು ಐಸೋಲೇಟ್ ಮಾಡಲಾಗಿದೆ. ಇಷ್ಟು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಯೂನಿವರ್ಸಿಟಿಯ ಹಾಸ್ಟೆಲ್​​ಗಳಲ್ಲಿರುವ ವಿದ್ಯಾರ್ಥಿಗಳಿಗೆ ರೂಂ ಖಾಲಿ ಮಾಡುವಂತೆ ಸೂಚಿಸಲಾಗಿದೆ. ಮೇ 10ರೊಳಗೆ ಹಾಸ್ಟೆಲ್​ ಖಾಲಿ ಮಾಡಬೇಕು ಎಂದು ಹೇಳಲಾಗಿದೆ.

ಶಾಲಾ-ಕಾಲೇಜುಗಳು ಶುರುವಾದ ಬೆನ್ನಲ್ಲೇ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ತಗಲುವ ಪ್ರಮಾಣವೂ ಹೆಚ್ಚಿದೆ. ಇತ್ತೀಚೆಗೆ ಉತ್ತರಾಖಂಡ್​​ನ ವೆಲ್ಹಾಮ್ ಬಾಲಕಿಯರ ಶಾಲೆಯಲ್ಲಿ 16 ವಿದ್ಯಾರ್ಥಿನಿಗಳಲ್ಲಿ ಕೊರೊನಾ ದೃಢಪಟ್ಟಿತ್ತು. ಇನ್ನು ದೆಹಲಿ, ನೊಯ್ಡಾ, ಗಾಝಿಯಾಬಾದ್​​ನ ಕೆಲವು ಶಾಲೆಗಳ ವಿದ್ಯಾರ್ಥಿಗಳಲ್ಲೂ ಸೋಂಕು ದೃಢಪಟ್ಟಿದೆ.  ಇದು ಸಹಜವಾಗಿಯೇ ಆತಂಕಕಕ್ಕೆ ಕಾರಣವಾಗಿದೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:53 am, Thu, 5 May 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್