ನವದೆಹಲಿ: ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಜನವರಿ 1ರಿಂದ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು (RT-PCR Test) ಕಡ್ಡಾಯಗೊಳಿಸಲಾಗಿದೆ. ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ (Air Suvidha Portal) ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್ ಅನ್ನು ಅಪ್‌ಲೋಡ್ ಮಾಡಬೇಕು. ಭಾರತಕ್ಕೆ ಪ್ರಯಾಣ ಬೆಳೆಸುವ 72 ಗಂಟೆಗಳಿಗೂ ಮುನ್ನ ಅವರು ಕೊವಿಡ್ ಪರೀಕ್ಷೆ (COVID Test) ನಡೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಪ್ರಪಂಚದಾದ್ಯಂತ ಹೆಚ್ಚುತ್ತಿರುವ COVID-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಾದ್ಯಂತ ಅದರಲ್ಲೂ ಮುಖ್ಯವಾಗಿ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್ ದೇಶಗಳಲ್ಲಿ ಹೆಚ್ಚುತ್ತಿರುವ ಕೊವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: Covid-19 4th Wave: ಚೀನಾದ ಹೊಸ ಕೊವಿಡ್ ರೂಪಾಂತರಿ ಮನುಷ್ಯನ ಮೆದುಳಿನ ಮೇಲೆ ದಾಳಿ ಮಾಡುತ್ತದಾ?; ತಜ್ಞರು ಹೇಳೋದಿಷ್ಟು
ಭಾರತದಲ್ಲಿ ಗುರುವಾರ 268 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು. ಇದು ಡಿಸೆಂಬರ್ 2ರಿಂದ ಅತಿ ಹೆಚ್ಚು ದಾಖಲಾಗಿರುವ ಕೊವಿಡ್ ಪ್ರಕರಣಗಳು ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.