ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ: ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘನೆ

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಅನೇಕ ರಾಷ್ಟ್ರಗಳ ನಾಯಕರು ಹೊಗಳುತ್ತಿದ್ದಾರೆ. ಭಾರತದ ಆಪ್ತ ರಾಷ್ಟ್ರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮೋದಿ ಅವರ ನಾಯಕತ್ವವನ್ನು ಗುಣಗಾನ ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಮೋದಿಯನ್ನು ಶ್ಲಾಘಿಸಿದ ಪುಟಿನ್, ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂದಿದ್ದಾರೆ. ಅಲ್ಲದೆ, ಭಾರತದ ಸ್ವತಂತ್ರ ವಿದೇಶಾಂಗ ನೀತನ್ನು ಹೊಗಳಿದ್ದಾರೆ.

ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ: ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘನೆ
ಪ್ರಧಾನಿ ಮೋದಿ ಅವರನ್ನು ಶ್ಲಾಘಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್Image Credit source: Reuters
Follow us
Rakesh Nayak Manchi
|

Updated on: Jan 26, 2024 | 9:08 PM

ನವದೆಹಲಿ, ಜ.26: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸುವುದರ ಜೊತೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬಗ್ಗೆ ಗುಣಗಾನ ಮಾಡಿದ್ದಾರೆ. ‘ರಷ್ಯನ್ ವಿದ್ಯಾರ್ಥಿ ದಿನ’ದ ಪ್ರಯುಕ್ತ ಕಲಿನಿನ್‌ಗ್ರಾಡ್ ಪ್ರದೇಶದ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪುಟಿನ್, ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂದರು.

ಪ್ರಸ್ತುತ ಪ್ರಧಾನ ಮಂತ್ರಿಯ ನಾಯಕತ್ವದ ಗುಣಗಳಿಂದಾಗಿ ಭಾರತವು ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಅಭಿವೃದ್ಧಿ ಮತ್ತು ಬೆಳವಣಿಗೆಯ ದರವನ್ನು ಹೊಂದಿದೆ ಎಂದು ಪುಟಿನ್ ಹೇಳಿದ್ದಾಗಿ ರಷ್ಯಾ ಮೂಲದ ಮಾಧ್ಯಮ ನೆಟ್ವರ್ಕ್ ರಷ್ಯಾ ಟುಡೆ (ಆರ್ಟಿ) ವರದಿ ಮಾಡಿದೆ.

ಭಾರತವು ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಅಭಿವೃದ್ಧಿ ಮತ್ತು ಬೆಳವಣಿಗೆಯ ದರವನ್ನು ಹೊಂದಿದೆ ಮತ್ತು ಅದು ಕೂಡ ಪ್ರಸ್ತುತ ಪ್ರಧಾನ ಮಂತ್ರಿಯ ನಾಯಕತ್ವದ ಗುಣಗಳಿಂದಾಗಿ. ಅವರ ನಾಯಕತ್ವದಲ್ಲಿ ಭಾರತವು ಅಂತಹ ವೇಗವನ್ನು ತಲುಪಿತು ಎಂದು ಅವರು ಪ್ರಧಾನಿ ಮೋದಿಯನ್ನು ಶ್ಲಾಘಿಸಿದರು.

ಇದನ್ನೂ ಓದಿ: Republic Day 2024: ಗಣರಾಜ್ಯೋತ್ಸವ: ಭಗವಂತ ರಾಮನಿಗೆ ಪ್ರಿಯವಾದ ಬಣ್ಣದ ಧಿರಿಸಿನಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ಮೋದಿಯವರ ನೀತಿಗಳನ್ನು ಮೆಚ್ಚಿದ ಪುಟಿನ್, ಭಾರತ ಮತ್ತು ರಷ್ಯಾ ನಡುವೆ ನಿರಂತರವಾಗಿ ಬೆಳೆಯುತ್ತಿರುವ ಸಂಬಂಧಗಳ ಬಗ್ಗೆ ಮಾತನಾಡಿದ್ದಾರೆ. ಭಾರತ ಮತ್ತು ರಷ್ಯಾ ನಡುವೆ ಬೆಳೆಯುತ್ತಿರುವ ನಿಕಟತೆ ಮತ್ತು ಬಲವಾದ ಬಾಂಧವ್ಯಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ನೀತಿಗಳು ಕಾರಣ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ಮಹತ್ತರವಾದ ಪ್ರಗತಿಯನ್ನು ಸಾಧಿಸುತ್ತಿದೆ. ರಷ್ಯಾ ತನ್ನ ದೇಶೀಯ ಕೈಗಾರಿಕೆಗಳ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಭಾರತದಂತಹ ಪಾಲುದಾರರ ಯಶಸ್ಸಿನ ಕಥೆಗಳನ್ನು ಅನುಕರಿಸಬಹುದು ಎಂದು ಅವರು ಹೇಳಿದ್ದಾರೆ. ರಷ್ಯಾ ಅಧ್ಯಕ್ಷರು ಮೋದಿ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಶ್ಲಾಘಿಸಿದರು ಮತ್ತು ಇದು ಭಾರತೀಯ ಆರ್ಥಿಕತೆಯ ಮೇಲೆ ನಿಜವಾಗಿಯೂ ಪರಿಣಾಮವನ್ನು ಬೀರಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್