ಲೋಕಸಭೆ ಚುನಾವಣೆ: ಮುಂಬೈನಲ್ಲಿ ಇಂದು ‘ಇಂಡಿಯಾ’ ಒಕ್ಕೂಟದ 3ನೇ ಸಭೆ, ಹೊಸ ಚಿಹ್ನೆ ಬಿಡುಗಡೆ, ಪ್ರಧಾನಿ ಅಭ್ಯರ್ಥಿ ಘೋಷಣೆ ಸಾಧ್ಯತೆ

ಲೋಕಸಭೆ ಚುನಾವಣೆಗೆ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಭರ್ಜರಿ ತಯಾರಿ ನಡೆಸುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಶತಾಯ ಗತಾಯವಾಗಿ ಸೋಲಿಸಬೇಕು ಎಂದು ಪಣತೊಟ್ಟಿದೆ. ಇಂಡಿಯಾ ಒಕ್ಕೂಟದ ಮೂರನೇ ಸಭೆ ಇಂದು ಮುಂಬೈನಲ್ಲಿ ನಡೆಯುತ್ತಿದೆ, ಒಕ್ಕೂಟದ ಹೊಸ ಲೋಗೋ ಹಾಗೂ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆ: ಮುಂಬೈನಲ್ಲಿ ಇಂದು ‘ಇಂಡಿಯಾ’ ಒಕ್ಕೂಟದ 3ನೇ ಸಭೆ, ಹೊಸ ಚಿಹ್ನೆ ಬಿಡುಗಡೆ, ಪ್ರಧಾನಿ ಅಭ್ಯರ್ಥಿ ಘೋಷಣೆ ಸಾಧ್ಯತೆ
ಇಂಡಿಯಾ ಒಕ್ಕೂಟImage Credit source: CNBCTV18.COM
Follow us
ನಯನಾ ರಾಜೀವ್
|

Updated on:Aug 31, 2023 | 8:13 AM

ಲೋಕಸಭೆ ಚುನಾವಣೆ(Lok Sabha Election)ಗೆ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಭರ್ಜರಿ ತಯಾರಿ ನಡೆಸುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಶತಾಯ ಗತಾಯವಾಗಿ ಸೋಲಿಸಬೇಕು ಎಂದು ಪಣತೊಟ್ಟಿದೆ. ಇಂಡಿಯಾ ಒಕ್ಕೂಟದ ಮೂರನೇ ಸಭೆ ಇಂದು ಮುಂಬೈನಲ್ಲಿ ನಡೆಯುತ್ತಿದೆ, ಒಕ್ಕೂಟದ ಹೊಸ ಲೋಗೋ ಹಾಗೂ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಎರಡು ದಿನಗಳ ಸಭೆ ನಡೆಯಲಿದ್ದು‌ 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಇಂಡಿಯಾ ಒಕ್ಕೂಟದ ಹೊಸ ಲೋಗೊ ಅನಾವರಣ ಮಾಡಲಾಗುತ್ತದೆ.‌

ಅಶೋಕ ಚಕ್ರ ರಹಿತ ತ್ರಿವರ್ಣ ಧ್ವಜ ಬಹುತೇಕ ಒಕ್ಕೂಟದ ಧ್ವಜವಾಗಿರಲಿದ್ದು, ಚಿಹ್ನೆಯ ಬಗ್ಗೆ ಇನ್ನು ನಾಯಕರು ಸುಳಿವು ಬಿಟ್ಟುಕೊಟ್ಟಿಲ್ಲ. ಸಮನ್ವಯ ಸಮಿತಿ, ಅಧ್ಯಕ್ಷರು ಮತ್ತು ಸಂಚಾಲಕರನ್ನು ನೇಮಕ ಸಾಧ್ಯತೆ ಜೊತೆಗೆ ‘ಬಿಜೆಪಿ ಚಲೇ ಜಾವೋ’ ಅಭಿಯಾನ ಆರಂಭಿಸುವ ನಿರೀಕ್ಷೆಯಿದೆ. ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಉದ್ಧವ್‌ ಠಾಕ್ರೆ, ಶರದ್‌ ಪವಾರ್‌, ಮಮತಾ ಬ್ಯಾನರ್ಜಿ, ಅರವಿಂದ್‌ ಕೇಜ್ರಿವಾಲ್‌ ಸೇರಿ 26 ಪಕ್ಷಗಳ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಬಿಹಾರ ಡಿಸಿಎಂ ತೇಜಸ್ವಿ ಯಾದವ್‌ ಅವರು ಮುಂಬೈಗೆ ತೆರಳಿದ್ದಾರೆ.

150 ಕೋಣೆಗಳನ್ನು ಬುಕ್‌ ಮಾಡಲಾಗಿದೆ, ರಾತ್ರಿ ಉದ್ಧವ್‌ ಠಾಕ್ರೆ ಇಂಡಿಯಾ ನಾಯಕರಿಗೆ ಭೋಜನ ಕೂಟ ಆಯೋಜಿಸಿದ್ದಾರೆ, ಸೀಟು ಹಂಚಿಕೆ ಹಾಗೂ ಲೋಗೊ ಅನಾವರಣ ಜತೆಗೆ ಮಧ್ಯಪ್ರದೇಶ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಗೆಲುವಿಗೆ ರಣತಂತ್ರವನ್ನೂ ರೂಪಿಸಲು ಯೋಜಿಸಲಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರನ್ನು ಪ್ರಧಾನಿ ಅಭ್ಯರ್ಥಿ ಎಂಬುದಾಗಿ ಘೋಷಿಸಬೇಕು.

ಮತ್ತಷ್ಟು ಓದಿ: ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ಪ್ರತಿಪಕ್ಷಗಳ ಒಕ್ಕೂಟದ ಮೂರನೇ ಸಭೆ

ದೆಹಲಿಯಲ್ಲಿ ಹಣದುಬ್ಬರ ಕಡಿಮೆ ಇದೆ. ಉಚಿತವಾಗಿ ಶಿಕ್ಷಣ, ವಿದ್ಯುತ್‌ ನೀಡುತ್ತಿದ್ದಾರೆ. ಹೆಣ್ಣುಮಕ್ಕಳು ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದ್ದಾರೆ. ಹಾಗಾಗಿ ಅವರನ್ನೇ ಪಿಎಂ ಅಭ್ಯರ್ಥಿ ಎಂಬುದಾಗಿ ಘೋಷಿಸಬೇಕು ಎಂದು ಆಪ್‌ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಕಕ್ಕರ್‌ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ಇಲ್ಲ ಎಂದು ದೆಹಲಿ ಸಚಿವೆ ಮತ್ತು ಆಪ್ ನಾಯಕಿ ಅತಿಶಿ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:09 am, Thu, 31 August 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್