Weather update: ಜೂನ್ 17 ರವರೆಗೆ ದೆಹಲಿ, ಯುಪಿಯಲ್ಲಿ ಬಿಸಿಗಾಳಿ; ಈಶಾನ್ಯದಲ್ಲಿ ಭಾರೀ ಮಳೆ

|

Updated on: Jun 13, 2024 | 8:48 PM

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಈ ವಾರದ ಗರಿಷ್ಠ ತಾಪಮಾನವು ಒಂದೇ ಆಗಿರುವ ಸಾಧ್ಯತೆಯಿರುವುದರಿಂದ ಮುಂಬರುವ ದಿನಗಳಲ್ಲಿ ಇದರಲ್ಲಿ ಬದಲಾವಣೆ ಇರುವುದಿಲ್ಲ. ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಚಂಡೀಗಢ, ಜಾರ್ಖಂಡ್, ಹರ್ಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಬುಧವಾರ ಗರಿಷ್ಠ ತಾಪಮಾನವು 45-47 ಡಿಗ್ರಿ ಸೆಲ್ಸಿಯಸ್ ಆಗಿದ್ದು ಕಾನ್ಪುರದಲ್ಲಿ ತಾಪಮಾನವು 47.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

Weather update: ಜೂನ್ 17 ರವರೆಗೆ ದೆಹಲಿ, ಯುಪಿಯಲ್ಲಿ ಬಿಸಿಗಾಳಿ; ಈಶಾನ್ಯದಲ್ಲಿ ಭಾರೀ ಮಳೆ
ದೆಹಲಿಯಲ್ಲಿ ಬಿಸಿಲು
Follow us on

ದೆಹಲಿ ಜೂನ್ 13: ದೆಹಲಿ, ಉತ್ತರ ಪ್ರದೇಶ, ಪಂಜಾಬ್ ಮತ್ತು ಚಂಡೀಗಢದಲ್ಲಿ ಮುಂಬರುವ 4 ರಿಂದ 5 ದಿನಗಳವರೆಗೆ ಬಿಸಿಗಾಳಿ (heatwave) ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಎಚ್ಚರಿಸಿದೆ. “ಮುಂದಿನ 4-5 ದಿನಗಳಲ್ಲಿ ಭಾರತದ ಉತ್ತರ ಭಾಗಗಳಲ್ಲಿ ಬಿಸಿಗಾಳಿಯಿಂದ ತೀವ್ರ ಶಾಖದ ಅಲೆಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರದ ರಾಜ್ಯಗಳಲ್ಲಿ ಬಿಸಿಗಾಳಿ ಮುಂದುವರಿಯಲಿದ್ದು, ಈಶಾನ್ಯ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ. 4-5 ದಿನಗಳಲ್ಲಿ ಉಪ ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಈಶಾನ್ಯ ಭಾರತದಲ್ಲಿ ಭಾರೀ ಮತ್ತು ಅತ್ಯಂತ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತನ್ನ ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಿದೆ.

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಈ ವಾರದ ಗರಿಷ್ಠ ತಾಪಮಾನವು ಒಂದೇ ಆಗಿರುವ ಸಾಧ್ಯತೆಯಿರುವುದರಿಂದ ಮುಂಬರುವ ದಿನಗಳಲ್ಲಿ ಇದರಲ್ಲಿ ಬದಲಾವಣೆ ಇರುವುದಿಲ್ಲ. ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಚಂಡೀಗಢ, ಜಾರ್ಖಂಡ್, ಹರ್ಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಬುಧವಾರ ಗರಿಷ್ಠ ತಾಪಮಾನವು 45-47 ಡಿಗ್ರಿ ಸೆಲ್ಸಿಯಸ್ ಆಗಿದ್ದು ಕಾನ್ಪುರದಲ್ಲಿ ತಾಪಮಾನವು 47.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಜೂನ್ 13 ರಿಂದ ಜೂನ್ 17 ರವರೆಗೆ ತೀವ್ರತರವಾದ ಬಿಸಿ ಗಾಳಿ ಇರಲಿದ್ದು, ಗಂಗಾನದಿ ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಜೂನ್ 13 ರಿಂದ 15 ರವರೆಗೆ ಬಿಸಿಗಾಳಿ ಇರಲಿದೆ.  ಜೂನ್ 13 ರಿಂದ 17 ರವರೆಗೆ ದೆಹಲಿ-ಹರಿಯಾಣ-ಚಂಡೀಗಢ ಪ್ರದೇಶ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಮುಂದುವರಿಯುವ ನಿರೀಕ್ಷೆಯಿದೆ. ಆದರೆ ತೀವ್ರ ಶಾಖದ ಪರಿಸ್ಥಿತಿಗಳು ಜೂನ್ 16 ಮತ್ತು 17 ರಂದು ಈ ಪ್ರದೇಶಗಳಲ್ಲಿ ಪ್ರತ್ಯೇಕ ಪಾಕೆಟ್‌ಗಳ ಮೇಲೆ ಪರಿಣಾಮ ಬೀರಬಹುದು.

ಇದನ್ನೂ ಓದಿ: Violence in Manipur: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೋರೆಯಲ್ಲಿ ಶಾಲೆಗೆ, ಜಿರಿಬಾಮ್‌ನಲ್ಲಿ ಮನೆಗಳಿಗೆ ಬೆಂಕಿ

ಕಳೆದ ವಾರ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಭಾರೀ ಮಳೆ ಸುರಿದಿದ್ದು, ಕೆಲವು ಕರಾವಳಿ ಪ್ರದೇಶಗಳಲ್ಲಿ ಜಲಾವೃತ ಮತ್ತು ಪ್ರವಾಹ ಉಂಟಾಗಿದೆ. ಇಂದು ಭಾರೀ ಮಳೆಯಿಂದಾಗಿ ತೀಸ್ತಾ ನದಿ ಉಕ್ಕಿ ಹರಿಯುತ್ತಿದ್ದು, ಪಶ್ಚಿಮ ಬಂಗಾಳದ ಕೆಲವು ಭಾಗಗಳು ಜಲಾವೃತಗೊಂಡಿವೆ. ಗುಡುಗು ಸಹಿತ ಭಾರೀ ಮಳೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಉತ್ತರ ಸಿಕ್ಕಿಂನಲ್ಲಿ ಭಾರಿ ಭೂಕುಸಿತದಿಂದಾಗಿ ಒಬ್ಬರು ಸಾವಿಗೀಡಾಗಿದ್ದು ಐವರು ನಾಪತ್ತೆಯಾಗಿದ್ದಾರೆ.

ಬುಧವಾರ ರಾತ್ರಿಯಿಡೀ ಸುರಿಯುತ್ತಿರುವ ನಿರಂತರ ಮಳೆಯು ತೀಸ್ತಾ ಬಜಾರ್‌ನಲ್ಲಿ ಡಾರ್ಜಿಲಿಂಗ್ ಮತ್ತು ಕಾಲಿಂಪಾಂಗ್‌ಗೆ ಸಂಪರ್ಕ ಕಲ್ಪಿಸುವ ಹಲವಾರು ರಸ್ತೆಗಳು ಮತ್ತು ಗೈಲ್ ಖೋಲಾದಂತಹ ಇತರ ಪ್ರದೇಶಗಳು ಜಲಾವೃತಗೊಂಡಿದ್ದರಿಂದ ಪರಿಸ್ಥಿತಿ ಹದಗೆಡಲು ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ