Corona Lockdown: ಇನ್ನೂ 6 ರಿಂದ 8 ವಾರಗಳ ಕಾಲ ಲಾಕ್​ಡೌನ್​ ಮುಂದುವರಿಕೆ ಅಗತ್ಯ: ಡಾ.ಬಲರಾಮ್​ ಭಾರ್ಗವ್

ಶೇ.10ಕ್ಕಿಂತ ಅಧಿಕ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಳ್ಳುವ ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡಲೇಬೇಕು. ಪಾಸಿಟಿವಿಟಿ ಪ್ರಮಾಣ ಶೇ.5ರಿಂದ 10ರ ನಡುವೆ ಬಂದಾಗ ನಿಯಮಾವಳಿಗಳನ್ನು ಸಡಿಲಿಸಬಹುದು. ಆದರೆ, ಆ ಪ್ರಮಾಣಕ್ಕೆ ಬರಲು ಆರರಿಂದ ಎಂಟು ವಾರಗಳಂತೂ ಬೇಕೇಬೇಕು: ICMR ಮುಖ್ಯಸ್ಥ

Corona Lockdown: ಇನ್ನೂ 6 ರಿಂದ 8 ವಾರಗಳ ಕಾಲ ಲಾಕ್​ಡೌನ್​ ಮುಂದುವರಿಕೆ ಅಗತ್ಯ: ಡಾ.ಬಲರಾಮ್​ ಭಾರ್ಗವ್
ಪ್ರಾತಿನಿಧಿಕ ಚಿತ್ರ
Follow us
Skanda
|

Updated on:May 12, 2021 | 3:11 PM

ದೆಹಲಿ: ಭಾರತದಲ್ಲಿ ಕ್ಷಿಪ್ರಗತಿಯಲ್ಲಿ ಹರಡುವ ಮೂಲಕ ಸಾಕಷ್ಟು ಸಾವು ನೋವುಗಳಿಗೆ ಕಾರಣವಾಗಿರುವ ಕೊರೊನಾ ಎರಡನೇ ಅಲೆಯನ್ನು ಹತೋಟಿಗೆ ತರಬೇಕೆಂದರೆ ಇನ್ನೂ ಆರರಿಂದ ಎಂಟು ವಾರಗಳ ಲಾಕ್​ಡೌನ್ ಅವಶ್ಯಕ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮುಖ್ಯಸ್ಥ ಡಾ.ಬಲರಾಮ್​ ಭಾರ್ಗವ್ ಅಭಿಪ್ರಾಯಪಟ್ಟಿದ್ದಾರೆ. ರಾಯಿಟರ್ಸ್​ ಸುದ್ದಿ ಸಂಸ್ಥೆಗೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಜಿಲ್ಲೆಗಳು ಮುಂದಿನ ಆರರಿಂದ ಎಂಟು ವಾರಗಳ ತನಕ ಲಾಕ್​ಡೌನ್​ ಆದರೆ ಉತ್ತಮ. ಪರೀಕ್ಷೆಗೆ ಒಳಪಟ್ಟವರ ಪೈಕಿ ಶೇ.10ಕ್ಕಿಂತ ಹೆಚ್ಚು ಮಂದಿಗೆ ಪಾಸಿಟಿವ್ ಕಾಣಿಸಿಕೊಳ್ಳುತ್ತದೆ ಎಂದಾದಲ್ಲಿ ನಿಯಮ ಪಾಲನೆ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಭಾರತದ 718 ಜಿಲ್ಲೆಗಳಲ್ಲಿ ಪರೀಕ್ಷೆಗೆ ಒಳಗಾದ ಮಂದಿಯಲ್ಲಿ ಶೇ.10ಕ್ಕಿಂತ ಹೆಚ್ಚಿನವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದೆ. ನವದೆಹಲಿ, ಮುಂಬೈ, ಬೆಂಗಳೂರಿನಂತಹ ನಗರಗಳೂ ಅಪಾಯದಲ್ಲಿವೆ. ಇಂತಹ ಸಂದರ್ಭದಲ್ಲಿ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಯೊಬ್ಬರು ಲಾಕ್​ಡೌನ್ ವಿಸ್ತರಣೆ ಬಗ್ಗೆ ಮಾತನಾಡಿರುವುದು ಗಮನಾರ್ಹವಾಗಿದ್ದು, ಐಸಿಎಂಆರ್ ಮುಖ್ಯಸ್ಥರು ನೀಡಿರುವ ಸಲಹೆಯ ಕುರಿತು ಪರಿಶೀಲಿಸಬೇಕಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶಾದ್ಯಂತ ಲಾಕ್​ಡೌನ್​ ಮಾಡುವ ಯೋಚನೆಯಿಂದ ದೂರವಿದ್ದು, ಆರ್ಥಿಕ ನಷ್ಟ ಅಥವಾ ಹೊರೆ ಹೊರಲು ಸಿದ್ಧವಿಲ್ಲದ ಕಾರಣ ಆ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಿದೆ.

ಪ್ರಸ್ತುತ ಅನೇಕ ರಾಜ್ಯಗಳು ಕೊರೊನಾ ತಡೆಗಟ್ಟುವಿಕೆಗಾಗಿ ಹಲವು ರೀತಿಯ ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ಸಂದರ್ಭಕ್ಕನುಗುಣವಾಗಿ ಅದನ್ನು ವಿಸ್ತರಿಸಿಕೊಳ್ಳುತ್ತಿವೆ. ಡಾ.ಬಲರಾಮ್​ ಭಾರ್ಗವ್ ಅವರ ಪ್ರಕಾರ ಶೇ.10ಕ್ಕಿಂತ ಅಧಿಕ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಳ್ಳುವ ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡಲೇಬೇಕಿದ್ದು, ಪಾಸಿಟಿವಿಟಿ ಪ್ರಮಾಣವು ಶೇ.5ರಿಂದ 10ರ ನಡುವೆ ಬಂದಾಗ ನಿಯಮಾವಳಿಗಳನ್ನು ಸಡಿಲಿಸಬಹುದು. ಆದರೆ, ಆ ಪ್ರಮಾಣಕ್ಕೆ ಬರಲು ಆರರಿಂದ ಎಂಟು ವಾರಗಳಂತೂ ಬೇಕೇಬೇಕು ಎನ್ನಲಾಗುತ್ತಿದೆ.

ಭಾರತದ ರಾಜಧಾನಿ ದೆಹಲಿಯಲ್ಲಿ ಶೇ.35ಕ್ಕೆ ತಲುಪಿದ್ದ ಪಾಸಿಟಿವಿಟಿ ಪ್ರಮಾಣ ಈಗ ಶೇ.17ಕ್ಕೆ ಬಂದಿದೆ. ಹಾಗೆಂದ ಮಾತ್ರಕ್ಕೆ ಈಗ ಒಂದುವೇಳೆ ನಿಯಮ ಸಡಿಲಗೊಳಿಸಿದರೆ ಅದು ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಡಲಿದೆ ಎಂದು ಎಚ್ಚರಿಸಿದ್ದಾರೆ. ಅವರು ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಭಾರತ ಸರ್ಕಾರವನ್ನು ಟೀಕಿಸದಿದ್ದರೂ ಪರಿಸ್ಥಿತಿಯ ಗಂಭೀರತೆ ಬಗ್ಗೆ ಎಚ್ಚೆತ್ತುಕೊಳ್ಳುವಲ್ಲಿ ತಡವಾಯಿತು ಎಂದಿದ್ದಾರೆ.

ಸದ್ಯ ದೇಶದಲ್ಲಿ 3.5 ಲಕ್ಷ ಪ್ರಕರಣಗಳು ಹಾಗೂ 4 ಸಾವಿರಕ್ಕೂ ಹೆಚ್ಚು ಸಾವು ಪ್ರತಿನಿತ್ಯ ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದ್ದು, ಕೆಲ ತಜ್ಞರು ಹೇಳುವ ಪ್ರಕಾರ ದಾಖಲೆಯಲ್ಲಿನ ಸಂಖ್ಯೆಗಿಂತಲೂ ಈ ಪ್ರಮಾಣ ಶೇ.5ರಿಂದ ಶೇ.10ರಷ್ಟು ಹೆಚ್ಚಿರುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಐಸಿಎಂಆರ್​ನ ಕೆಲ ತಜ್ಞರು ನಮ್ಮ ಸಂಸ್ಥೆಗೆ ಸರ್ಕಾರ ಹಾಗೂ ರಾಜಕಾರಣದ ನೀತಿ ನಿಯಮಗಳ ಬಗ್ಗೆ ಭಾರೀ ಬೇಸರವಿದೆ. ಧಾರ್ಮಿಕ ಉತ್ಸವ, ರಾಜಕೀಯ ಸಭೆ, ಮೆರವಣಿಗೆ ಮಾಡಿದ ಸರ್ಕಾರದ ಬಗ್ಗೆ ಜುಗುಪ್ಸೆ ಬಂದಿದೆ ಹಾಗೂ ಹಲವು ರಾಜಕೀಯ ಸಭೆಗಳಲ್ಲಿ ಸ್ವತಃ ಪ್ರಧಾನಿಯೇ ಮಾಸ್ಕ್ ಇಲ್ಲದೇ ಭಾಗವಹಿಸಿರುವುದು ವಿಷಾದನೀಯ ಎಂದಿದ್ದಾರೆ.

ಆದರೆ, ಸರ್ಕಾರದ ಬಗ್ಗೆ ಅಸಮಾಧಾನ ಇದೆ ಎಂಬುದನ್ನು ತಳ್ಳಿ ಹಾಕಿದ ಡಾ.ಬಲರಾಮ್​ ಭಾರ್ಗವ್, ರಾಜಕೀಯ ಮೆರವಣಿಗೆ, ಸಭೆ, ಸಮಾರಂಭಗಳನ್ನು ಮಾಡಿದ್ದು ಸರಿಯಲ್ಲ. ಭಾರತವಾಗಲೀ ಅಥವಾ ಯಾವುದೇ ದೇಶದಲ್ಲಾಗಲೀ ಈ ಸಂದರ್ಭದಲ್ಲಿ ಇಂತಹ ಸಂಗತಿಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ. ಅದನ್ನೆಲ್ಲಾ ಮಾಡಬಾರದು ಎನ್ನುವುದು ಸಾಮಾನ್ಯ ಜ್ಞಾನ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ದೇಶದ ಎಲ್ಲಾ ನಾಗರಿಕರಿಗೆ ಲಸಿಕೆ ಕೊಟ್ಟು ಮುಗಿಸಬೇಕು ಎಂದರೆ ಎಷ್ಟು ದಿನ ಬೇಕು? ಇಲ್ಲಿದೆ ನೋಡಿ ವಿವರ 

ಇಂಗ್ಲೆಂಡ್​ಗೆ ಲಸಿಕೆ ಕಳುಹಿಸಲು ಅನುಮತಿ ಕೇಳಿದ ಸೆರಮ್​ ಸಂಸ್ಥೆ; ದೇಶದಲ್ಲೇ ಕೊರತೆ ಇದೆ, ರಫ್ತು ಸಾಧ್ಯವಿಲ್ಲ ಎಂದ ಭಾರತ ಸರ್ಕಾರ

Published On - 3:10 pm, Wed, 12 May 21

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು