AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರ ನಿರ್ಮಾಣಕ್ಕೆ VHPಗೆ ಎಷ್ಟು ದೇಣಿಗೆ ಬಂದಿದೆ ಬಹಿರಂಗಪಡಿಸಿ: ದಿಗ್ವಿಜಯ್ ಸಿಂಗ್

ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್​ ಮೂಲಕ ಹಣ ನೀಡುತ್ತಿದ್ದೇನೆ ಎಂದು ದಿಗ್ವಿಜಯ್​ ಸಿಂಗ್​ ಪತ್ರದಲ್ಲಿ ತಿಳಿಸಿದ್ದಾರೆ.

ಮಂದಿರ ನಿರ್ಮಾಣಕ್ಕೆ VHPಗೆ ಎಷ್ಟು ದೇಣಿಗೆ ಬಂದಿದೆ ಬಹಿರಂಗಪಡಿಸಿ: ದಿಗ್ವಿಜಯ್ ಸಿಂಗ್
ದಿಗ್ವಿಜಯ್​ ಸಿಂಗ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 8:05 PM

Share

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಇದಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ 1,11,111 ರೂಪಾಯಿ ದೇಣಿಗೆ ನೀಡಿದ್ದಾರೆ.

ದೇಣಿಗೆಯನ್ನು ಚೆಕ್​ ಮೂಲಕ ನೀಡಿರುವ ದಿಗ್ವಿಜಯ್ ಸಿಂಗ್​ ಪ್ರಧಾನಿ ನರೇಂದ್ರ ಮೋದಿಗೆ ಎರಡು ಪುಟಗಳ ಪತ್ರದ ಜೊತೆಗೆ ಚೆಕ್ ಕಳಿಸಿದ್ದಾರೆ. ಅಷ್ಟೇ ಅಲ್ಲ, ಪತ್ರ ಒಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ ಹಣದ ವಿವರ ತಿಳಿಸುವಂತೆ ಒತ್ತಾಯ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್​ ಮೂಲಕ ಹಣ ನೀಡುತ್ತಿದ್ದೇನೆ. ಇದರ ಜೊತೆಗೆ ವಿಎಚ್​ಪಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಎಷ್ಟು ಹಣ ಸಂಗ್ರಹ ಮಾಡಿದೆ ಎನ್ನುವುದು ಬಹಿರಂಗವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್​ ಕುಮಾರ್ ಮನವಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More