ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಇದಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ 1,11,111 ರೂಪಾಯಿ ದೇಣಿಗೆ ನೀಡಿದ್ದಾರೆ.
ದೇಣಿಗೆಯನ್ನು ಚೆಕ್ ಮೂಲಕ ನೀಡಿರುವ ದಿಗ್ವಿಜಯ್ ಸಿಂಗ್ ಪ್ರಧಾನಿ ನರೇಂದ್ರ ಮೋದಿಗೆ ಎರಡು ಪುಟಗಳ ಪತ್ರದ ಜೊತೆಗೆ ಚೆಕ್ ಕಳಿಸಿದ್ದಾರೆ. ಅಷ್ಟೇ ಅಲ್ಲ, ಪತ್ರ ಒಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ ಹಣದ ವಿವರ ತಿಳಿಸುವಂತೆ ಒತ್ತಾಯ ಮಾಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್ ಮೂಲಕ ಹಣ ನೀಡುತ್ತಿದ್ದೇನೆ. ಇದರ ಜೊತೆಗೆ ವಿಎಚ್ಪಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಎಷ್ಟು ಹಣ ಸಂಗ್ರಹ ಮಾಡಿದೆ ಎನ್ನುವುದು ಬಹಿರಂಗವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್ ಕುಮಾರ್ ಮನವಿ