ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯು ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತ ರೈತರು ದೆಹಲಿ ಕೆಂಪುಕೋಟೆ ಆವರಣವನ್ನು ಪ್ರವೇಶಿಸಿದ್ದಾರೆ. ಕೆಂಪು ಕೋಟೆಯ ಧ್ವಜಸ್ತಂಭದಲ್ಲಿ ರೈತಧ್ವಜವನ್ನು ಹಾರಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾ ನಿರತ ರೈತರು ಕೆಂಪುಕೋಟೆಗೆ ನುಗ್ಗಿದ್ದಾರೆ. ನೂತನ ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿರುವ ಸಾವಿರಾರು ರೈತರು ಧ್ವಜಾರೋಹಣ ಸ್ಥಳಕ್ಕೆ ಪ್ರವೇಶಿಸಿದ್ದಾರೆ. ಧ್ವಜಸ್ತಂಭ ಏರಿ ಎರಡು ಬಾವುಟಗಳನ್ನು ಹಾರಿಸಿದ್ದಾರೆ.
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೆಂಪುಕೋಟೆಗೆ ರೈತರು ಮುತ್ತಿಗೆ ಹಾಕಿದ್ದಾರೆ. ಪ್ರಧಾನಿ ಧ್ವಜಾರೋಹಣ ಮಾಡುವ ಸ್ಥಳಕ್ಕೆ ರೈತರು ಹೋಗಿದ್ದಾರೆ.
#WATCH A protestor hoists a flag from the ramparts of the Red Fort in Delhi#FarmLaws #RepublicDay pic.twitter.com/Mn6oeGLrxJ
— ANI (@ANI) January 26, 2021
ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು
Published On - 2:51 pm, Tue, 26 January 21