ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ
ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.
ನವದೆಹಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹ. ಹೀಗಾಗಿ ಇದರಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್ ನಾಯಕ ಎ.ಕೆ. ಆ್ಯಂಟನಿ ಹೇಳಿದ್ದಾರೆ. ಸುದ್ದಿ ವಾಹಿನಿ ಸಂಪಾದಕ ಅರ್ನಬ್ ಗೋಸ್ವಾಮಿ ವಾಟ್ಸಾಪ್ ಚ್ಯಾಟ್ ಲೀಕ್ ಆಗಿದ್ದು, ಅದರಲ್ಲಿ ಸೇನೆಗೆ ಸಂಬಂಧಿಸಿದ ಮಾಹಿತಿಗಳು ಇದ್ದವು. ಇದನ್ನು ಉಲ್ಲೇಖಿಸಿ ಆ್ಯಂಟನಿ ಈ ಹೇಳಿಕೆ ನೀಡಿದ್ದಾರೆ.
ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.
ಫೆಬ್ರವರಿ 19, 2019ರಂದು ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲ್ಕೋಟ್ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಷ್-ಇ-ಮೊಹ್ಮದ್ ಸಂಘಟನೆಯ ನೆಲೆಗಳು ನಾಶಗೊಂಡಿವೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್ ಫೆಬ್ರವರಿ 23ರಂದೇ ಮಾತುಕತೆ ನಡೆಸಿದ್ದರು ಎನ್ನುವುದು ಸೋರಿಕೆ ಆದ ವಾಟ್ಸಾಪ್ ಚ್ಯಾಟ್ನಿಂದ ತಿಳಿದು ಬಂದಿದೆ.
ವಿಶ್ಲೇಷಣೆ | ಅರ್ನಬ್ ವಾಟ್ಸ್ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?