ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ರೈತರು ಮತ್ತೊಮ್ಮೆ ಬಾವುಟ ಹಾರಿಸಿದ್ದಾರೆ. ಈ ಮೂಲಕ ಒಂದೇ ದಿನ ಕೆಂಪುಕೋಟೆ ಮೇಲೆ ರೈತರು ಮೂರು ಬಾರಿ ಬಾವುಟ ಹಾರಿಸಿದಂತಾಗಿದೆ.
ಕೆಂಪುಕೋಟೆ ಧ್ವಜಸ್ಥಂಬದ ಮೇಲೆ ಮಧ್ಯಾಹ್ನ ಸಿಖ್ ಹಾಗೂ ರೈತ ಧ್ವಜ ಹಾರಿಸಲಾಗಿತ್ತು. ಇದಾದ ಬೆನ್ನಲ್ಲೇ, ಗುಮ್ಮಟದ ಮೇಲೆ ರೈತರ ಧ್ವಜ ಹಾರಾಡಿತ್ತು. ನಂತರ ಮಾತನಾಡಿದ್ದ ರೈತ ನಾಯಕರು, ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್ ಮೊದಲಿದ್ದ ಸ್ಥಳಕ್ಕೆ ಹೋಗುತ್ತೇವೆ ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.
ಹೇಳಿಕೆ ನೀಡಿದ ನಂತರ ಅಚ್ಚರಿ ಎಂಬಂತೆ ರೈತರು ಗುಮ್ಮಟದ ಕೆಳಭಾಗದಲ್ಲಿ ಮತ್ತೊಮ್ಮೆ ಬಾವುಟ ಹಾರಿಸಿದ್ದಾರೆ. ಪ್ರತಿಭಟನೆ ಕಾವು ತಣಿಯದ ಕಾರಣ, ಸನ್ನದ್ಧ ಸ್ಥಿತಿಯಲ್ಲಿರುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಸೂಚನೆ ನೀಡಿದೆ. ಪರಿಸ್ಥಿತಿ ಕೈಮೀರಿದರೆ ಹೆಚ್ಚುವರಿ ಭದ್ರತೆ ಒದಗಿಸಲು ಸರ್ಕಾರ ಈ ಸಿದ್ಧತೆ ಮಾಡಿಕೊಂಡಿದೆ.
ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ
ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು
Delhi Farmers Tractor Rally Photos | ಕೆಂಪುಕೋಟೆಗೆ ರೈತರ ಮುತ್ತಿಗೆ
Published On - 4:28 pm, Tue, 26 January 21