AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಮೆರವಣಿಗೆ: ಪ್ರತಿಭಟನಾನಿರತ ರೈತರು ಪೂರ್ವ ನಿರ್ಧರಿತ ಮಾರ್ಗಗಳನ್ನು ಬಿಟ್ಟು ಬೇರೆ ರಸ್ತೆ ಹಿಡಿದಿದ್ದೇಕೆ?

ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೆರವಣಿಗೆ ಆರಂಭಿಸಲು ಅನುಮತಿ ನೀಡಲಾಗಿತ್ತು. ಆದಾಗ್ಯೂ, ಇದಕ್ಕಿಂತ ಒಂದು ಗಂಟೆ ಮುಂಚೆಯೇ ರೈತರು ತಮ್ಮ ಪ್ರತಿಭಟನೆ ಆರಂಭಿಸಿದ್ದರು.

ಟ್ರ್ಯಾಕ್ಟರ್ ಮೆರವಣಿಗೆ: ಪ್ರತಿಭಟನಾನಿರತ ರೈತರು ಪೂರ್ವ ನಿರ್ಧರಿತ ಮಾರ್ಗಗಳನ್ನು ಬಿಟ್ಟು ಬೇರೆ ರಸ್ತೆ ಹಿಡಿದಿದ್ದೇಕೆ?
ರೈತರ ವಿರುದ್ಧ ಪೊಲೀಸರ ಅಶ್ರುವಾಯ ಪ್ರಯೋಗ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 26, 2021 | 6:50 PM

ದೆಹಲಿ: ದೆಹಲಿಯಲ್ಲಿ ಪ್ರತಿಭಟನಾನಿರತ ರೈತರು ಗಣರಾಜ್ಯೋತ್ಸವ ದಿನದಂದು ನಿಗದಿತ ರಸ್ತೆಗಳಲ್ಲಿಯೇ ಟ್ರ್ಯಾಕ್ಟರ್ ಮೆರವಣಿಗೆ ನಡೆಸಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಇದನ್ನು ರೈತ ನಾಯಕರೂ ಒಪ್ಪಿಕೊಂಡಿದ್ದರು. ಆದರೆ ಇಂದು ಟ್ರ್ಯಾಕ್ಟರ್ ಮೆರವಣಿಗೆ ನಡೆದದ್ದು ಬೇರೆ ಮಾರ್ಗದಲ್ಲಿ. ರೈತರು ಬೇರೆ ರಸ್ತೆಗಳಲ್ಲಿ ಯಾಕೆ ಪ್ರತಿಭಟನೆ ನಡೆಸಿದರು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡಾ ಪ್ರಶ್ನಿಸಿದ್ದಾರೆ.

ಇವರೆಲ್ಲ ಯುವಕರು. ಎಲ್ಲರೂ ಅಹಿಂಸೆ ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದೆಹಲಿಯ ಮೂರು ಗಡಿಪ್ರದೇಶಗಳಿಂದ ರೈತರ ಮೆರವಣಿಗೆ ಹೊರಡಲು ರೈತರಿಗೆ ದೆಹಲಿ ಪೊಲೀಸರು ಭಾನುವಾರ ಅನುಮತಿ ನೀಡಿದ್ದರು. ಇದಕ್ಕೆ ಒಪ್ಪಿದ್ದ ರೈತರು ಪೂರ್ವ ನಿರ್ಧಾರಿತ ಮಾರ್ಗದಲ್ಲಿಯೇ ನಾವು ಟ್ರ್ಯಾಕ್ಟರ್ ಮೆರವಣಿಗೆ ಮಾಡುತ್ತೇವೆ. ಬೇರೆ ಯಾವುದೇ ದಾರಿಯಿಂದ ದೆಹಲಿ ನಗರದೊಳಗೆ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು. 11 ಗಂಟೆಗೆ ಮೆರವಣಿಗೆ ಆರಂಭಿಸಲು ಅನುಮತಿ ನೀಡಲಾಗಿತ್ತು. ಆದಾಗ್ಯೂ, ಇದಕ್ಕಿಂತ ಒಂದು ಗಂಟೆ ಮುಂಚೆಯೇ ರೈತರು ತಮ್ಮ ಪ್ರತಿಭಟನೆ ಆರಂಭಿಸಿದ್ದರು.

ಇದನ್ನೂ ಓದಿ: In Depth Report | ದೆಹಲಿ ಕೆಂಪುಕೋಟೆಯಲ್ಲಿ ರೈತಧ್ವಜ, ಟ್ರ್ಯಾಕ್ಟರ್ ಪರೇಡ್ ಈವರೆಗೆ ಏನೆಲ್ಲಾ ನಡೆಯಿತು?

Farmers Protest

ರೈತರ ಪ್ರತಿಭಟನೆ

ರೈತರ ಟ್ರ್ಯಾಕ್ಟರ್ ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಪೊಲೀಸ್ ಮತ್ತು ರೈತರ ನಡುವೆ ಸಂಘರ್ಷ ನಡೆಯಿತು. ಸಿಂಗು ಮತ್ತು ಘಾಜೀಪುರ್ ಗಡಿ ಪ್ರದೇಶಗಳಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದರು.

11.30ರ ಹೊತ್ತಿಗೆ ಅಕ್ಷರಧಾಮ್ ದೇಗುಲದತ್ತ ಹೋಗುತ್ತಿದ್ದ ರೈತ ಪ್ರತಿಭಟನಾಕಾರರ ಗುಂಪು ಮಧ್ಯ ದೆಹಲಿಗೆ ನುಗ್ಗಿತು. ಘಾಜಿಪುರ್ ಮಾರುಕಟ್ಟೆಗೆ ಹೋಗಿ ಅಲ್ಲಿಂದ ಯುಟರ್ನ್ ತೆಗೆದುಕೊಳ್ಳುವಂತೆ ಪೊಲೀಸರು ಪ್ರತಿಭಟನಾಕಾರರರಿಗೆ ಹೇಳಿದ್ದರು. ಈ ವೇಳೆ ಮಧ್ಯ ದೆಹಲಿಗೆ ಮುನ್ನುಗ್ಗುತ್ತಿದ್ದ ರೈತರನ್ನು ತಡೆಯಲು ಪೊಲೀಸರು ಅಶ್ರುವಾಯು ಶೆಲ್​ಗಳನ್ನು ಸಿಡಿಸಿದರು.

ಅಲ್ಲಿಯವರೆಗೆೆ ಶಾಂತವಾಗಿದ್ದ ಟಿಕ್ರಿ ಸಮೀಪದ ನಂಗಲೋಯಿಯಲ್ಲಿ ಪೊಲೀಸ್ ಮತ್ತು ರೈತರ ಮೇಲೆ ಸಂಘರ್ಷವೇರ್ಪಟ್ಟಿತು. ನಂಗಲೋಯಿ ಚೌಕ್ ನಿಂದ ದೆಹಲಿ ನಗರದತ್ತ ಟ್ರ್ಯಾಕ್ಟರ್ ತಿರುಗಿಸಿದಾಗ ಪೊಲೀಸರು ಅಲ್ಲಿಂದ ಹಿಂದೆ ಸರಿಯುವಂತೆ ಹೇಳಿದರೂ ಪೊಲೀಸರು ಒಪ್ಪಲಿಲ್ಲ.

Live Updates | ಕೆಂಪುಕೋಟೆಯಲ್ಲಿ 3 ಕಡೆ ಬಾವುಟ ಹಾರಿಸಿದ ರೈತರು

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

ಕೆಂಪುಕೋಟೆಯಲ್ಲಿ ಮೂರನೇ ಬಾರಿಗೆ ಬಾವುಟ ಹಾರಿಸಿದ ರೈತರು

ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ