AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂಟರ್​ನೆಟ್ ಸೇವೆ ಸ್ಥಗಿತ

ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾವು ಜೋರಾಗಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂಟರ್​ನೆಟ್​ ಸೇವೆಯನ್ನು ರದ್ದು ಮಾಡಲಾಗಿದೆ.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂಟರ್​ನೆಟ್ ಸೇವೆ ಸ್ಥಗಿತ
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Jan 26, 2021 | 4:21 PM

Share

ಬೆಂಗಳೂರು: ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾವು ಜೋರಾಗಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂಟರ್​ನೆಟ್​ ಸೇವೆಯನ್ನು ರದ್ದು ಮಾಡಲಾಗಿದೆ.

ರೈತರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ರೈತರು ಕೆಂಪುಕೋಟೆಯತ್ತ ಹೆಜ್ಜೆ ಹಾಕಿದ್ದಾರೆ. ಅಲ್ಲಿರುವ ಸಾಕಷ್ಟು ರೈತರು ಫೇಸ್​ಬುಕ್​ ಲೈವ್​ ಮಾಡಿ ಉಳಿದ ರೈತರು ಕೆಂಪುಕೋಟೆಯತ್ತ ಬರುವಂತೆ ಸ್ಫೂರ್ತಿ ನೀಡಿದ್ದರು. ಜತೆಗೆ ವಾಟ್ಸ್​​ಆ್ಯಪ್​ ಸಂದೇಶಗಳು ಕಾಡ್ಗಿಚ್ಚಿನಂತೆ ಹರಡಿದ್ದವು. ಇವುಗಳನ್ನು ತಡೆಯುವ ಉದ್ದೇಶದಿಂದ ಕೆಂಪುಕೋಟೆ ಸುತ್ತಮುತ್ತಲ ಭಾಗ ಸೇರಿ ಅನೇಕ ಕಡೆಗಳಲ್ಲಿ ಇಂಟರ್​ನೆಟ್​ ಸೇವ್​ ರದ್ದು ಮಾಡಲಾಗಿದೆ.

ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಆದೇಶ ನೀಡಿರುವ ಪತ್ರ

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪರಿಸ್ಥಿತಿ ಸಮಸ್ಥಿತಿಗೆ ಮರಳಿದ ನಂತರ ಇಂಟರ್​ನೆಟ್​ ಸೇವೆ ಮರಳಿ ನೀಡುವ ಸಾಧ್ಯತೆ ಇದೆ.

Live Updates | ಕೆಂಪುಕೋಟೆ ಗುಮ್ಮಟದ ಮೇಲೆ ಕಿಸಾನ್ ಬಾವುಟ

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

Published On - 3:59 pm, Tue, 26 January 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?