AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಮುಂದಿನ ಸರ್ಕಾರದ ಸ್ವರೂಪ ಬಗ್ಗೆ ತಿಳಿದಿಲ್ಲ, ಸ್ಥಳಾಂತರಿಸುವ ಕಾರ್ಯಕ್ಕೆ ಆದ್ಯತೆ: ವಿದೇಶಾಂಗ ಸಚಿವಾಲಯ

Arindam Bagchi: ಪ್ರಸ್ತುತ ಕಾಬೂಲ್ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತಿಲ್ಲ. ವಿಮಾನ ನಿಲ್ದಾಣ ಸೇವೆ ಪುನರಾರಂಭಗೊಂಡಾಗ ಕಾಬೂಲ್‌ನಿಂದ ಜನರನ್ನು ಸ್ಥಳಾಂತರಿಸುವ ನಮ್ಮ ಕಾರ್ಯಾಚರಣೆಯನ್ನು ನಾವು ಪುನರಾರಂಭಿಸುತ್ತೇವೆ ಎಂದು ಅವರು ಹೇಳಿದರು. ಭಾರತದ ಪ್ರಸ್ತುತ ಆದ್ಯತೆಯು ಕಾಬೂಲ್‌ನಲ್ಲಿರುವ ಭಾರತೀಯರ ಸುರಕ್ಷತೆಯಾಗಿದೆ.

ಅಫ್ಘಾನಿಸ್ತಾನದಲ್ಲಿ ಮುಂದಿನ ಸರ್ಕಾರದ ಸ್ವರೂಪ ಬಗ್ಗೆ ತಿಳಿದಿಲ್ಲ, ಸ್ಥಳಾಂತರಿಸುವ ಕಾರ್ಯಕ್ಕೆ ಆದ್ಯತೆ: ವಿದೇಶಾಂಗ ಸಚಿವಾಲಯ
ಅರಿಂದಮ್ ಬಾಗ್ಚಿ
TV9 Web
| Edited By: |

Updated on: Sep 02, 2021 | 6:48 PM

Share

ದೆಹಲಿ: ತಾಲಿಬಾನ್‌ (Taliban) ಅಫ್ಘಾನಿಸ್ತಾನದಲ್ಲಿ (Afghanistan) ರಚಿಸಲಿರುವ ಸರ್ಕಾರದ ಸ್ವರೂಪದ ಯಾವುದೇ ವಿವರಗಳು ಭಾರತಕ್ಕೆ ತಿಳಿದಿಲ್ಲ ಎಂದು ಸರ್ಕಾರ ಗುರುವಾರ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಕಳೆದ ಕೆಲವು ದಿನಗಳಿಂದ ಸ್ಥಗಿತಗೊಂಡಿರುವ ಸ್ಥಳಾಂತರ ಕಾರ್ಯಾಚರಣೆ ಕಾಬೂಲ್ ವಿಮಾನ ನಿಲ್ದಾಣದಿಂದ ಪುನರಾರಂಭಗೊಳ್ಳಲಿದೆ ಎಂದಿದ್ದಾರೆ. ಪ್ರಸ್ತುತ ಕಾಬೂಲ್ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತಿಲ್ಲ. ವಿಮಾನ ನಿಲ್ದಾಣ ಸೇವೆ ಪುನರಾರಂಭಗೊಂಡಾಗ ಕಾಬೂಲ್‌ನಿಂದ ಜನರನ್ನು ಸ್ಥಳಾಂತರಿಸುವ ನಮ್ಮ ಕಾರ್ಯಾಚರಣೆಯನ್ನು ನಾವು ಪುನರಾರಂಭಿಸುತ್ತೇವೆ ಎಂದು ಅವರು ಹೇಳಿದರು. ಭಾರತದ ಪ್ರಸ್ತುತ ಆದ್ಯತೆಯು ಕಾಬೂಲ್‌ನಲ್ಲಿರುವ ಭಾರತೀಯರ ಸುರಕ್ಷತೆಯಾಗಿದೆ.

ಭಾರತ ಮಂಗಳವಾರ ತಾಲಿಬಾನ್‌ನೊಂದಿಗೆ ತನ್ನ ಮೊದಲ ಔಪಚಾರಿಕ ಸಂಪರ್ಕವನ್ನು ಸ್ಥಾಪಿಸಿತು. ಕತಾರ್‌ನ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ಅವರು ಭಾರತೀಯ ಮಿಷನ್‌ನಲ್ಲಿ ದೋಹಾದಲ್ಲಿರುವ ತಾಲಿಬಾನ್‌ನ ರಾಜಕೀಯ ಕಚೇರಿಯ ಮುಖ್ಯಸ್ಥ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್‌ಜಾಯ್ ಅವರನ್ನು ಭೇಟಿಯಾದರು.

ಯುದ್ಧ ಪೀಡಿತ ದೇಶದಲ್ಲಿ ಭಾರತೀಯರ ಅದರಲ್ಲೂ ಅಲ್ಪಸಂಖ್ಯಾತರ ಸುರಕ್ಷತೆಯ ಕುರಿತು ಮಾತುಕತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಅಫ್ಘಾನ್ ನೆಲವನ್ನು ಬಳಸಬಾರದು ಎಂದು ಮಿತ್ತಲ್ ತಾಲಿಬಾನ್ ಗೆ ಒತ್ತಾಯಿಸಿದರು.

ಕಳೆದ ತಿಂಗಳು ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಇಸ್ಲಾಮಿಕ್ ಉಗ್ರಗಾಮಿ ಗುಂಪಿನೊಂದಿಗಿನ ಮುಂದಿನ ಸಭೆಗಳ ಬಗ್ಗೆ ಕೇಳಿದಾಗ ಬಾಗ್ಚಿ ಅವರು ಈ ಬಗ್ಗೆ ಯಾವುದೇ ಅಪ್ ಡೇಟ್ ಇಲ್ಲ ಎಂದು ಹೇಳಿದರು. ಅದರ ಬಗ್ಗೆ ಊಹಿಸಲು ಬಯಸುವುದಿಲ್ಲ. ಇದು ಹೌದೋ ಅಲ್ಲವೋ ಎಂಬ ವಿಷಯ ಅಲ್ಲ. ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಬಾರದು ಎಂಬುದು ನಮ್ಮ ಉದ್ದೇಶ” ಎಂದು ಅವರು ಹೇಳಿದರು.

ಇದನ್ನೂ ಓದಿ: Afghanistan: ಅಫ್ಘಾನಿಸ್ತಾನದಲ್ಲಿ ವಶಪಡಿಸಿಕೊಂಡ ಮಿಲಿಟರಿ ಸಾಮಾಗ್ರಿಗಳನ್ನು ಕಂದಹಾರ್‌ನಲ್ಲಿ ಮೆರವಣಿಗೆ ನಡೆಸಿ ಪ್ರದರ್ಶಿಸಿದ ತಾಲಿಬಾನ್

ಇದನ್ನೂ ಓದಿ:  Afghanistan Crisis: ಅಫ್ಘಾನಿಸ್ತಾನದ ಗೌಪ್ಯ ಸ್ಥಳದಿಂದ ಅಮೆರಿಕನ್ನರು, ಅಫ್ಘಾನ್​ ಕಮಾಂಡೋಗಳನ್ನು ರಹಸ್ಯವಾಗಿ ಶಿಫ್ಟ್​ ಮಾಡಿದ್ದು ಹೇಗೆ?

(India not aware of any details or nature of the government that could be formed in Afghanistan by the Taliban says MEA)

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು