AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Update: ದೇಶದಲ್ಲಿ ಒಂದೇ ದಿನ 16,764 ಕೊರೊನಾ ಪ್ರಕರಣಗಳು ದಾಖಲು; ಒಮಿಕ್ರಾನ್ ಕೇಸ್​ಗಳಲ್ಲೂ ತೀವ್ರ ಏರಿಕೆ

Covid 19 | Vaccination: ಭಾರತದಲ್ಲಿ ಸತತ ಮೂರನೇ ದಿನ ಕೊವಿಡ್ ಪ್ರಕರಣಗಳು ಏರಿಕೆಯಾಗಿವೆ. ಒಮಿಕ್ರಾನ್ ಪ್ರಕರಣಗಳು ಸಾವಿರದ ಗಡಿ ದಾಟಿವೆ.

Covid Update: ದೇಶದಲ್ಲಿ ಒಂದೇ ದಿನ 16,764 ಕೊರೊನಾ ಪ್ರಕರಣಗಳು ದಾಖಲು; ಒಮಿಕ್ರಾನ್ ಕೇಸ್​ಗಳಲ್ಲೂ ತೀವ್ರ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on: Dec 31, 2021 | 12:32 PM

Share

ಶುಕ್ರವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೊರೊನಾ ಹಾಗೂ ಒಮಿಕ್ರಾನ್ ರೂಪಾಂತರಿ ಪ್ರಕರಣಗಳ ಅಂಕಿಅಂಶವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರೋನ ವೈರಸ್‌ನ ಒಮಿಕ್ರಾನ್ ರೂಪಾಂತರವು ದೇಶದಲ್ಲಿ ತೀವ್ರವಾಗಿ ಹೆಚ್ಚುತ್ತಿರುವುದು ಕಂಡುಬಂದಿದೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 1000ದ ಗಡಿ ದಾಟಿದ್ದು, ಇದುವರೆಗೆ 1,270 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು 374 ರೋಗಿಗಳು ಚೇತರಿಸಿಕೊಂಡು, ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಇದೇ ವೇಳೆ ತಿಳಿಸಲಾಗಿದೆ. ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಕ್ರಮವಾಗಿ 450 ಮತ್ತು 320 ಪ್ರಕರಣಗಳು ವರದಿಯಾಗಿವೆ. ಗುರುವಾರ ರಾತ್ರಿ ಬಿಹಾರದಲ್ಲಿ ಒಮಿಕ್ರಾನ್​ನ ಮೊದಲ ಪ್ರಕರಣ ವರದಿಯಾಗಿದೆ.

ಈ ನಡುವೆ, ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 16,764 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸತತ ಮೂರನೇ ದಿನವೂ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದ್ದು, ದೇಶದಲ್ಲಿ ಇದುವರೆಗೆ ಒಟ್ಟು 3,48,38,804 ಜನರಿಗೆ ಸೋಂಕು ಕಾಣಿಸಿಕೊಂಡಂತಾಗಿದೆ.  7,500 ಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡಿದ್ದು, 220 ಜನರು ಒಂದೇ ದಿನದಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈ ವರೆಗೆ ಒಟ್ಟು 3,42,66,363 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, 481,080 ಜನರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು ಸುಮಾರು 9,000 ರಷ್ಟು ಹೆಚ್ಚಾಗಿದ್ದು, 91,361 ರಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕಳೆದ 24 ಗಂಟೆಗಳಲ್ಲಿ 12,50,837 ಮಾದರಿಗಳನ್ನು ಕೋವಿಡ್ -19 ವರದಿಗಾಗಿ ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 66,65,290 ಡೋಸ್‌ಗಳನ್ನು ನೀಡುವುದರೊಂದಿಗೆ ದೇಶದ ವ್ಯಾಕ್ಸಿನೇಷನ್ 1.44 ಬಿಲಿಯನ್ ಜನರನ್ನು ತಲುಪಿದಂತಾಗಿದೆ. ವಯಸ್ಕ ಜನಸಂಖ್ಯೆಯ ಶೇಕಡಾ 90 ರಷ್ಟು ಜನರಿಗೆ ಮೊದಲ ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹಲವು ರಾಜ್ಯಗಳು ನೈಟ್ ಕರ್ಫ್ಯೂ ಸೇರಿದಂತೆ ಬಿಗಿ ಕ್ರಮಗಳನ್ನು ಅನುಷ್ಠಾನಕ್ಕೆ ತಂದಿವೆ. ಪುದುಚೇರಿ ಹಾಗೂ ಹರ್ಯಾಣ ಇತ್ತೀಚೆಗೆ ನೈಟ್ ಕರ್ಫ್ಯೂ ಹೇರಿವೆ.

ಇದನ್ನೂ ಓದಿ:

ಮಕ್ಕಳ ಮೇಲೆ ಒಮಿಕ್ರಾನ್‌ ಪರಿಣಾಮ: ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆ

Omicron death in India: ಒಮಿಕ್ರಾನ್ ಸೋಂಕಿತ ವ್ಯಕ್ತಿಯ ಸಾವಿನ ಮೊದಲ ಪ್ರಕರಣ ಮುಂಬೈನಲ್ಲಿ ದಾಖಲು; ಮರಣಕ್ಕೆ ಒಮಿಕ್ರಾನ್ ಕಾರಣವಲ್ಲ ಎಂದ ಅಧಿಕಾರಿಗಳು

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್