ಭಾರತ ಮತ್ತು ಪಾಕ್ ಕದನ ವಿರಾಮ ಘೋಷಣೆ: ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ, ನಮ್ಮ ನಿಲುವು ಸ್ಪಷ್ಟ: ಜೈಶಂಕರ್

ವಿದೇಶಾಂಗ ಸಚಿವ ಜೈಶಂಕರ್​​ ಕೂಡ ಎಕ್ಸ್​​ ಮೂಲಕ ಟ್ವೀಟ್​​​ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಇಂದಿನಿಂದ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ.

ಭಾರತ ಮತ್ತು ಪಾಕ್ ಕದನ ವಿರಾಮ ಘೋಷಣೆ: ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ, ನಮ್ಮ ನಿಲುವು ಸ್ಪಷ್ಟ: ಜೈಶಂಕರ್
ಜೈಶಂಕರ್
Edited By:

Updated on: May 10, 2025 | 6:46 PM

ಭಾರತ ಮತ್ತು ಪಾಕಿಸ್ತಾನ (india pakistan) ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ (India-Pakistan ceasefire announced) ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್​​ ಮಾಡಿದ್ದರು. ಇದರ ಬೆನ್ನಲ್ಲೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಸುದ್ದಿಗೋಷ್ಠಿಯನ್ನು ನಡೆಸಿ, ಮೇ 12ರಂದು ಪಾಕ್ ನಮ್ಮ ಜತೆಗೆ ಮಾತುಕತೆ ನಡೆಸಲಿದೆ. ಅಲ್ಲಿಯವೆರಗೆ ಕದನ ವಿರಾಮ ಘೋಷಣೆ ಎಂದು ಹೇಳಿದರು. ಇದೀಗ ಈ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್​​ ಕೂಡ ಎಕ್ಸ್​​ ಮೂಲಕ ಟ್ವೀಟ್​​​ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಇಂದಿನಿಂದ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಇಂದು ಅಮೆರಿಕ ಜೊತೆ ಮಾತುಕತೆ ನಡೆಸಿದ್ದೆ.ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಅವರು ಇಂದು ಬೆಳಿಗ್ಗೆ ನನ್ನ ಜತೆ ಮಾತನಾಡಿದ್ದಾತೆ. ಅವರಿಗೂ ಕೂಡ ಸ್ಪಷ್ಟವಾಗಿ ಹೇಳಿದ್ದೇನೆ ಭಾರತದ ವಿಧಾನವು ಯಾವಾಗಲೂ ಅಳೆಯಲ್ಪಟ್ಟ ಮತ್ತು ಜವಾಬ್ದಾರಿಯುತವಾಗಿದೆ ಮತ್ತು ಹಾಗೆಯೇ ಉಳಿದಿದೆ ಎಂದು.

ಇನ್ನು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12:00 ಗಂಟೆಗೆ ಮತ್ತೆ ಮಾತನಾಡಲಿದ್ದಾರೆ ಎಂದು ದೇಶಾಂಗ ಕಾರ್ಯದರ್ಶಿ ಮಿಶ್ರಿ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ DGMO ಅವರಿಗೆ ಕರೆ ಮಾಡಿದರು. ಭಾರತೀಯ ಸಮಯ 1700 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು. ಇಂದು, ಈ ತಿಳುವಳಿಕೆಯನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಇದೀಗ ಪ್ರಧಾನಿ ಮೋದಿ ಅವರು ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಒಪ್ಪಿಕೊಂಡ ನಂತರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಆಗಮಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನಗಳು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಒಪ್ಪಿಕೊಂಡಿರುವ ಬಗ್ಗೆ ಜೆಕೆಯ ಮಾಜಿ ಡಿಜಿಪಿ ಎಸ್‌ಪಿ ವೈದ್ ಹೇಳಿದ್ದಾರೆ, ಇದು ಒಳ್ಳೆಯ ಬೆಳವಣಿಗೆ ಪಾಕಿಸ್ತಾನ ತನ್ನ ಭಯೋತ್ಪಾದನಾ ಕೃತ್ಯಗಳನ್ನು ನಿಲ್ಲಿಸಬೇಕು ಎಂಬ ಷರತ್ತನ್ನು ಭಾರತ ಇಟ್ಟುಕೊಂಡಿದೆ ಎಂದು ನಾನು ಭಾವಿಸುತ್ತೇನೆ. ಅಮೆರಿಕ ಮಧ್ಯಸ್ಥಿಕೆ ವಹಿಸುತ್ತಿತ್ತು.ಆದ್ದರಿಂದ, ಈ ಒಪ್ಪಂದವಾಯಿತು. ಕದನ ವಿರಾಮ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

ವಿದೇಶಾಂಗ ಕಾರ್ಯದರ್ಶಿ ಹೇಳಿದಂತೆ, ಸಮುದ್ರ, ವಾಯು ಮತ್ತು ಭೂಮಿಯ ಮೇಲಿನ ಎಲ್ಲಾ ಮಿಲಿಟರಿ ಚಟುವಟಿಕೆಗಳನ್ನು ನಿಲ್ಲಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಗೆ ಈ ತಿಳುವಳಿಕೆಯನ್ನು ಪಾಲಿಸಲು ಸೂಚನೆ ನೀಡಲಾಗಿದೆ. ಇನ್ನು ರಕ್ಷಣಾ ಇಲಾಖೆ ಕೂಡ ಇದಕ್ಕೆ ಒಪ್ಪಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 6:28 pm, Sat, 10 May 25