AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪಾಕಿಸ್ತಾನ ಉದ್ವಿಗ್ನತೆ: ದೇಶದ 32 ವಿಮಾನ ನಿಲ್ದಾಣಗಳು ಬಂದ್, ಇಲ್ಲಿದೆ ಲಿಸ್ಟ್

ಪಾಕಿಸ್ತಾನ ಮತ್ತು ಭಾರತ ನಡುವಿನ ಉದ್ವಿಗ್ನ ಪರಿಸ್ಥಿತಿಯ ಕಾರಣ, ಭಾರತ ಸರ್ಕಾರವು ಮೇ 15 ರವರೆಗೆ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಪಾಕಿಸ್ತಾನದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂಡೀಗಢ, ಶ್ರೀನಗರ, ಅಮೃತಸರ ಮುಂತಾದ ಗಡಿಯ ಸಮೀಪವಿರುವ ವಿಮಾನ ನಿಲ್ದಾಣಗಳು ಈ ನಿರ್ಬಂಧಕ್ಕೆ ಒಳಪಟ್ಟಿವೆ. ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಪ್ರಯಾಣ ಮಾರ್ಗಸೂಚಿಗಳನ್ನು ನೀಡಿವೆ. ಬಂದ್ ಆಗಿರುವ ವಿಮಾನ ನಿಲ್ದಾಣಗಳ ವಿವರ ಇಲ್ಲಿದೆ.

ಭಾರತ ಪಾಕಿಸ್ತಾನ ಉದ್ವಿಗ್ನತೆ: ದೇಶದ 32 ವಿಮಾನ ನಿಲ್ದಾಣಗಳು ಬಂದ್, ಇಲ್ಲಿದೆ ಲಿಸ್ಟ್
ಸಾಂದರ್ಭಿಕ ಚಿತ್ರImage Credit source: PTI
Ganapathi Sharma
|

Updated on: May 10, 2025 | 6:58 AM

Share

ನವದೆಹಲಿ, ಮೇ 10: ಭಾರತ ಪಾಕಿಸ್ತಾನ (Indo Pak Tension) ನಡುವಣ ಉದ್ವಿಗ್ನ ಪರಿಸ್ಥಿತಿ ಮಧ್ಯೆ ಭಾರತ ಸರ್ಕಾರ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಮೇ 15 ರ ಗುರುವಾರ ಬೆಳಿಗ್ಗೆ 5:29 ರವರೆಗೆ ದೇಶಾದ್ಯಂತ 32 ವಿಮಾನ ನಿಲ್ದಾಣಗಳಲ್ಲಿ (Airports) ಕಾರ್ಯಾಚರಣೆ ಸ್ಥಗಿತಗೊಳಿಸಲು ಆದೇಶಿಸಿದೆ. ಪಾಕಿಸ್ತಾನ (Pakistan) ನಡೆಸುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ಈ ಹಿಂದೆ ಮೇ 10ರ ವರೆಗೆ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸುವ ತೀರ್ಮಾನ ಘೋಷಿಸಲಾಗಿತ್ತು. ಆದರೆ, ಇದೀಗ ಪರಿಸ್ಥಿತಿ ಬಿಗಡಾಯಿಸಿರುವ ಕಾರಣ ಮೇ 15 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಯಾವೆಲ್ಲ ವಿಮಾನ ನಿಲ್ದಾಣಗಳು ಬಂದ್?

ಚಂಡೀಗಢ, ಶ್ರೀನಗರ, ಅಮೃತಸರ, ಲೂಧಿಯಾನ, ಭುಂತರ್, ಕಿಶನ್‌ಗಢ, ಪಟಿಯಾಲ, ಶಿಮ್ಲಾ, ಜೈಸಾಲ್ಮೇರ್, ಪಠಾಣ್‌ಕೋಟ್, ಜಮ್ಮು, ಬಿಕಾನೇರ್, ಲೇಹ್, ಪೋರ್‌ಬಂದರ್ ಸೇರಿದಂತೆ 32 ವಿಮಾನ ನಿಲ್ದಾಣಗಳನ್ನು ಮೇ 15 ರವರೆಗೆ ಮುಚ್ಚಲಾಗುತ್ತದೆ. ಈ ಎಲ್ಲಾ ವಿಮಾನ ನಿಲ್ದಾಣಗಳು ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ನಗರಗಳಲ್ಲಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಭದ್ರತಾ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ
Image
ಪಾಕಿಸ್ತಾನದ ಸೇನೆ ಮೇಲೆ ಬಲೂಚಿಸ್ತಾನ ಗ್ರೆನೇಡ್‌ ದಾಳಿ
Image
ಸೇನಾ ಕಾರ್ಯಾಚರಣೆಯ ಲೈವ್ ಬೇಡ: ಟಿವಿ ಚಾನೆಲ್​ಗಳಿಗೆ ರಕ್ಷಣಾ ಇಲಾಖೆ ಸೂಚನೆ
Image
ಪಾಕ್​ ಜನ ಪ್ರಧಾನಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
Image
ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

ಕಾರ್ಯಾಚರಣೆ ಸ್ಥಗಿತಗೊಂಡ ವಿಮಾನ ನಿಲ್ದಾಣಗಳ ಪಟ್ಟಿ

ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷದ ಹಿನ್ನೆಲೆಯಲ್ಲಿ, ಹಲವಾರು ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಪ್ರಯಾಣ ಮಾರ್ಗಸೂಚಿ, ಸಲಹೆಗಳನ್ನು ಬಿಡುಗಡೆ ಮಾಡಿವೆ. ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಅಪ್​ಡೇಟ್​​ಗಳನ್ನು ತಿಳಿದುಕೊಳ್ಳುವಂತೆ ಸಲಹೆ ನೀಡಿವೆ.

‘ವಿಮಾನಯಾನ ಅಧಿಕಾರಿಗಳು ಹೊರಡಿಸಿದ ಅಧಿಸೂಚನೆಯ ಪ್ರಕಾರ, ದೇಶಾದ್ಯಂತ ಹಲವಾರು ವಿಮಾನ ನಿಲ್ದಾಣಗಳ ಮುಚ್ಚುವಿಕೆ ಸದ್ಯಕ್ಕೆ ಮುಂದುವರಿಯಲಿದೆ. ಏತನ್ಮಧ್ಯೆ, ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಚಂಡೀಗಢ, ಭುಜ್, ಜಾಮ್‌ನಗರ, ರಾಜ್‌ಕೋಟ್‌ಗೆ ಎಲ್ಲಾ ವಿಮಾನಗಳನ್ನು ಗುರುವಾರ (ಮೇ 15) ಬೆಳಿಗ್ಗೆ 5:29 ರವರೆಗೆ ರದ್ದುಗೊಳಿಸಲಾಗಿದೆ’ ಏರ್ ಇಂಡಿಯಾ ಎಕ್ಸ್​ ಸಂದೇಶದಲ್ಲಿ ಶುಕ್ರವಾರ ತಿಳಿಸಿತ್ತು.

ಇದನ್ನೂ ಓದಿ: ಭಾರತದ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಸಾಲ ಕೊಟ್ಟ IMF

ಮೇ 15 ರವರೆಗೆ 24 ನಗರಗಳಲ್ಲಿನ ವಿಮಾನ ನಿಲ್ದಾಣಗಳನ್ನು ಮುಚ್ಚಿರುವುದರಿಂದ ಇಂಡಿಗೋ ವಿಮಾನಯಾನ ಸಂಸ್ಥೆ ಕೂಡ ವಿಮಾನ ರದ್ದತಿಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ