
ನವದೆಹಲಿ, ಮೇ 11: ಭಾರತ ಹಾಗೂ ಪಾಕಿಸ್ತಾನ(Pakistan)ದ ನಡುವೆ ಯುದ್ಧ ವಿರಾಮ ಘೋಷಣೆಯಾಗಿದ್ದರೂ ಕೂಡ ಪಾಕಿಸ್ತಾನವು ಗಡಿಯಲ್ಲಿ ಗುಂಡಿನ ದಾಳಿಯನ್ನು ಮುಂದುವರೆಸಿದೆ. ಶನಿವಾರ ಸಂಜೆ ವಿದೇಶಾಂಗ ಸಚಿವಾಲಯವು ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ತಿಳಿಸಿತ್ತು. ಮೇ 12 ರಂದು ಎರಡೂ ದೇಶಗಳ ಡಿಜಿಎಂಒಗಳ ನಡುವೆ ಮತ್ತೆ ಮಾತುಕತೆ ನಡೆಯಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದರು.
ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್(Pahalgam)ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು. ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ. ಆದರೂ ಪಾಕಿಸ್ತಾನ ತನ್ನ ವರಸೆಯನ್ನು ಬಿಡದೆ ಭಾರತದ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ನಂತರ, ರಾಂಬನ್‌ನಲ್ಲಿರುವ ಬಾಗ್ಲಿಹಾರ್ ಅಣೆಕಟ್ಟನ್ನು ತೆರೆಯಲಾಗಿದೆ. ಇದಲ್ಲದೆ, ರಿಯಾಸಿಯ ಸಲಾಲ್ ಅಣೆಕಟ್ಟಿನ ದ್ವಾರಗಳನ್ನು ಸಹ ತೆರೆಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಖಂಡಿತವಾಗಿಯೂ ಕದನ ವಿರಾಮವಿದೆ. ಆದರೆ ಭದ್ರತಾ ಸಂಸ್ಥೆಗಳು ಇನ್ನೂ ಸಂಪೂರ್ಣವಾಗಿ ಜಾಗರೂಕವಾಗಿವೆ. ಎಸ್ಐಎ ಕುಲ್ಗಾಮ್‌ನ ಹಲವಾರು ಸ್ಥಳಗಳ ಮೇಲೆ ದಾಳಿ ಮಾಡಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ನಂತರವೂ, ಸೂಕ್ಷ್ಮ ಸ್ಥಳಗಳಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಅಮೃತಸರದಲ್ಲಿರುವ ಶ್ರೀ ಗುರು ರಾಮ್ ದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ನೂ ತೆರೆಯಲಾಗಿಲ್ಲ. ಅದೇ ಸಮಯದಲ್ಲಿ, ಭಾನುವಾರ, ವಿಮಾನ ನಿಲ್ದಾಣದ ಆವರಣದಲ್ಲಿರುವ ಗುರುದ್ವಾರ ಸಂತರ ಜಿಯಲ್ಲಿ ಭಕ್ತರ ಗುಂಪು ಸೇರಲು ಪ್ರಾರಂಭಿಸಿತು.
ಆದರೆ ಭದ್ರತಾ ನಿಯಮಗಳಿಂದಾಗಿ ಭಕ್ತರಿಗೆ ಒಳಗೆ ಪ್ರವೇಶವಿರಲಿಲ್ಲ. ಭಾರತ ಹಾಗೂ ಪಾಕಿಸ್ತಾನದ ಪ್ರಸ್ತುತ ಸ್ಥಿತಿ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪಾಕಿಸ್ತಾನದ ಮುರಿದ್ಕೆಯಲ್ಲಿ ಉಗ್ರರ 4 ತರಬೇತಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದೇವೆ, ಬಹವಾಲ್ಪುರ್‌ನಲ್ಲಿ ಉಗ್ರರ 4 ತರಬೇತಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದೇವೆ. ಕೇವಲ ಉಗ್ರರ ತರಬೇತಿ ಕೇಂದ್ರಗಳನ್ನು ಧ್ವಂಸ ಮಾಡಿದ್ದೇವೆ. ಆದ್ರೆ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿದೆ. ಏರ್ ಡಿಫೆನ್ಸ್ ಸಿಸ್ಟಮ್ ಮೂಲಕ ಎಲ್ಲ ಡ್ರೋನ್ ಛಿದ್ರಗೊಳಿಸಿದ್ದೇವೆ ಎಂದು ಏರ್ ಮಾರ್ಷಲ್ ಎ.ಕೆ.ಭಾರ್ತಿ ಮಾಹಿತಿ ನೀಡಿದರು.
ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಭಾರತದಿಂದ ಆಪರೇಷನ್ ಸಿಂದೂರ್ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ಉಗ್ರರ ಅಡಗುತಾಣಗಳನ್ನು ಹೊಡೆದಿದ್ದೇವೆ. ನಮ್ಮ ಗುರಿ ಕೇವಲ ಉಗ್ರರ ಅಡಗುತಾಣವಾಗಿತ್ತು, ನಾಗರಿಕರಾಗಿರಲಿಲ್ಲ. ಪಿಒಕೆ, ಪಾಕಿಸ್ತಾನಕ್ಕೆ ಒಳ ನುಗ್ಗಿ 9 ಉಗ್ರರ ಅಡಗುತಾಣ ನಾಶ ಮಾಡಿದ್ದೇವೆ. ಆಪರೇಷನ್ ಸಿಂದೂರ್‌ನಲ್ಲಿ ಧ್ವಂಸ ಮಾಡಿದ ಸಾಕ್ಷ್ಯಗಳು ನಮ್ಮ ಬಳಿ ಇವೆ. ಮೇ 7 ರಂದು ನಡೆದ ‘ಆಪರೇಷನ್ ಸಿಂದೂರ್’ನಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು
ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮಾಹಿತಿ ನೀಡಿದರು.
ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಜೊತೆ ಚರ್ಚೆ ಮಾಡಿದ್ದು, ಈ ವೇಳೆ ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಕಡ್ಡಿ ಮುರಿದಂತೆ ಅಮೆರಿಕ ಉಪಾಧ್ಯಕ್ಷರಿಗೆ ಹೇಳಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಆಪರೇಷನ್ ಸಿಂಧೂರ್ ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಲಾಗಿದೆ. ಉಗ್ರರಿಗೆ ಭಾರತ ಸುರಕ್ಷಿತ ಸ್ಥಳವಲ್ಲವೆಂದು ಸಂದೇಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಭಾರತದಲ್ಲಿ ಭಯೋತ್ಪಾದನೆ ಬೆಳೆಯಲು ಬಿಡಲ್ಲ. ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶ ರವಾನಿಸಿದರು.
ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಲಾಗಿದ್ದು, ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಸಿದ್ದಕ್ಕೆ ಸೇನೆಗೆ ಅಭಿನಂದನೆಗಳು. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಆಪರೇಷನ್ ಸಿಂಧೂರ್ ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಲಾಗಿದೆ ಎಂದರು.
ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಘಟಕ ಉದ್ಘಾಟಿಸಿ ಬಳಿಕ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್. ಭಾರತದ ವಿರೋಧಿಗಳಿಗೆ ಬ್ರಹ್ಮೋಸ್ ಕ್ಷಿಪಣಿ ಸ್ಪಷ್ಟ ಸಂದೇಶ ಕೊಟ್ಟಿದೆ. ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಭಾರತದ ಒಂದು ಶಕ್ತಿಯಾಗಿದೆ ಭಾರತದ ಶಕ್ತಿ, ಸಾಮರ್ಥ್ಯ ಏನೆಂಬುದು ವಿಶ್ವಕ್ಕೆ ಮತ್ತೊಮ್ಮೆ ಗೊತ್ತಾಗಿದೆ ಎಂದರು.
ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ
ಪಾಕಿಸ್ತಾನದೊಂದಿಗಿನ ಗಡಿ ಸಂಘರ್ಷ ಮುಗಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಎನ್‌ಎಸ್‌ಎ ದೋವಲ್ ಸಭೆ ನಡೆಯುತ್ತಿದೆ. ಸಿಡಿಎಸ್ ಮತ್ತು ಸೇನಾ ಮುಖ್ಯಸ್ಥರು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.
ನಿನ್ನೆಯ ಕದನ ವಿರಾಮದ ನಂತರ, ಇಲ್ಲಿಯವರೆಗೆ ಯಾವ ರೀತಿ ಬೆಳವಣಿಗೆಯಾಗಿದೆ ಎಂಬುದರ ಕುರಿತು ರಕ್ಷಣಾ ಸಚಿವಾಲಯ ಇಂದು ಪತ್ರಿಕಾಗೋಷ್ಠಿ ನಡೆಸಲಿದೆ.
ಯುದ್ಧ ಎಂದೂ ಭಾರತದ ಆಯ್ಕೆಯಲ್ಲ’’ ಎಂದು ಭಾರತ(India)ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್(Ajit Doval) ಚೀನಾದ ವಿದೇಶಾಂಗ ಸಚಿವರಿಗೆ ಹೇಳಿದ್ದಾರೆ
ಕದನ ವಿರಾಮ ಘೋಷಿಸಿದ್ದರೂ ಕೂಡ ಅಮೃತಸರದಲ್ಲಿ ಸೈರನ್ ಕೇಳುತ್ತಿದೆ. ರೆಡ್ ಅಲರ್ಟ್ ಇದ್ದು ಎಲ್ಲರಿಗೂ ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ.
Published On - 9:13 am, Sun, 11 May 25