AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿರುವುದು ಭಾರತದಲ್ಲಿ: ನರೇಂದ್ರ ಮೋದಿ

. ಕೋಟ್ಯಂತರ ರೈತರ ಜೀವನವು ಹಾಲಿನ ಮೇಲೆ ಅವಲಂಬಿತವಾಗಿರುವಾಗ, ಭಾರತವು ವಾರ್ಷಿಕವಾಗಿ ₹ 8.5 ಲಕ್ಷ ಕೋಟಿ ಮೌಲ್ಯದ ಹಾಲನ್ನು ಉತ್ಪಾದಿಸುತ್ತದೆ. ಇದರ ಬಗ್ಗೆ  ದೊಡ್ಡ ಆರ್ಥಿಕ ತಜ್ಞರು ಸೇರಿದಂತೆ ಅನೇಕ ಜನರು ಗಮನ ಹರಿಸುವುದಿಲ್ಲ

ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿರುವುದು ಭಾರತದಲ್ಲಿ: ನರೇಂದ್ರ ಮೋದಿ
ಬನಾಸ್ ಡೈರಿಗೆ ಭೇಟಿ ನೀಡಿದ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 19, 2022 | 6:11 PM

Share

ದೆಹಲಿ: ಭಾರತವು ವಾರ್ಷಿಕವಾಗಿ ₹ 8.5 ಲಕ್ಷ ಕೋಟಿ ಮೌಲ್ಯದ ಹಾಲನ್ನು(Milk) ಉತ್ಪಾದಿಸುತ್ತದೆ, ಇದು ಗೋಧಿ ಮತ್ತು ಅಕ್ಕಿ ವಹಿವಾಟುಗಿಂತಲೂ ಹೆಚ್ಚು.  ಸಣ್ಣ ರೈತರು ಹೈನುಗಾರಿಕೆ ವಲಯದ ದೊಡ್ಡ ಫಲಾನುಭವಿಗಳು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಹೇಳಿದ್ದಾರೆ. ಇಂದು ಭಾರತವು ವಿಶ್ವದ ಅತಿ ಹೆಚ್ಚು ಹಾಲು ಉತ್ಪಾದಕ ರಾಷ್ಟ್ರವಾಗಿದೆ. ಕೋಟ್ಯಂತರ ರೈತರ ಜೀವನವು ಹಾಲಿನ ಮೇಲೆ ಅವಲಂಬಿತವಾಗಿರುವಾಗ, ಭಾರತವು ವಾರ್ಷಿಕವಾಗಿ ₹ 8.5 ಲಕ್ಷ ಕೋಟಿ ಮೌಲ್ಯದ ಹಾಲನ್ನು ಉತ್ಪಾದಿಸುತ್ತದೆ. ಇದರ ಬಗ್ಗೆ  ದೊಡ್ಡ ಆರ್ಥಿಕ ತಜ್ಞರು ಸೇರಿದಂತೆ ಅನೇಕ ಜನರು ಗಮನ ಹರಿಸುವುದಿಲ್ಲ, ”ಎಂದು ಬನಸ್ಕಾಂತದ (Banaskantha) ದಿಯೋದರ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಪ್ರಧಾನಿ ಹೇಳಿದರು. ಜಿಲ್ಲೆಯ ಹೊಸ ಡೈರಿ ಸಂಕೀರ್ಣ ಮತ್ತು ಬನಾಸ್ ಡೈರಿಯ ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದ ನಂತರ ಮಾತನಾಡುತ್ತಿದ್ದರವರು. “ಗ್ರಾಮಗಳ ವಿಕೇಂದ್ರೀಕೃತ ಆರ್ಥಿಕ ವ್ಯವಸ್ಥೆಯು ಇದಕ್ಕೆ ಉದಾಹರಣೆಯಾಗಿದೆ. ಇದಕ್ಕೆ ವಿರುದ್ಧವಾಗಿ, ಗೋಧಿ ಮತ್ತು ಅಕ್ಕಿಯ ವಹಿವಾಟು ಸಹ ₹ 8.5 ಲಕ್ಷ ಕೋಟಿಗೆ ಸಮನಾಗಿಲ್ಲ. ಸಣ್ಣ ರೈತರು ಹೈನುಗಾರಿಕೆ ವಲಯದ ದೊಡ್ಡ ಫಲಾನುಭವಿಗಳು” ಮೋದಿ ಹೇಳಿದರು.

ಹೊಸ ಡೈರಿ ಸಂಕೀರ್ಣ ಮತ್ತು ಬನಾಸ್ ಡೈರಿಯ ಆಲೂಗಡ್ಡೆ ಸಂಸ್ಕರಣಾ ಘಟಕವು ಸ್ಥಳೀಯ ರೈತರನ್ನು ಸಬಲೀಕರಣಗೊಳಿಸುವ ಮತ್ತು ಪ್ರದೇಶದ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. ಪ್ರಧಾನಮಂತ್ರಿಯವರು ಬನಾಸ್ ಸಮುದಾಯ ರೇಡಿಯೋ ಸ್ಟೇಷನ್ ಮತ್ತು ಪಾಲನ್‌ಪುರದಲ್ಲಿ ಚೀಸ್ ಉತ್ಪನ್ನಗಳು ಮತ್ತು ಪ್ರೊಟೀನ್ ಪುಡಿ ಉತ್ಪಾದನೆಗೆ ವಿಸ್ತೃತ ಸೌಲಭ್ಯಗಳು ಮತ್ತು ಡಾಮಾದಲ್ಲಿ ಸ್ಥಾಪಿಸಲಾದ ಸಾವಯವ ಗೊಬ್ಬರ ಮತ್ತು ಜೈವಿಕ ಅನಿಲ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ಗುಜರಾತ್ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಅಭಿವೃದ್ಧಿಯನ್ನು ಕಂಡಿರುವುದು ಹೆಮ್ಮೆ ತಂದಿದೆ

ಗಾಂಧಿನಗರದಲ್ಲಿರುವ ವಿದ್ಯಾ ಸಮೀಕ್ಷಾ ಕೇಂದ್ರವು ದೇಶಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಬದಲಾವಣೆಗಳನ್ನು ತರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ  ಅವರು ಮಂಗಳವಾರ ಹೇಳಿದ್ದಾರೆ. ಗುಜರಾತ್‌ನ  ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ವಿದ್ಯಾ ಸಮೀಕ್ಷಾ ಕೇಂದ್ರದಂತಹ ಆಧುನಿಕ ವ್ಯವಸ್ಥೆಯಿಂದ ದೇಶದ ಮಕ್ಕಳು ಪ್ರಯೋಜನ ಪಡೆಯುವ ಮೂಲಕ ಭಾರತಕ್ಕೆ ಉಜ್ವಲ ಭವಿಷ್ಯವನ್ನು ಖಾತ್ರಿಪಡಿಸುತ್ತಾರೆ ಎಂದರು. “ಗುಜರಾತ್ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಅಭಿವೃದ್ಧಿಯನ್ನು ಕಂಡಿರುವುದು ಹೆಮ್ಮೆ ತಂದಿದೆ. ನಿನ್ನೆ ಗಾಂಧಿನಗರದ ವಿದ್ಯಾ ಸಮೀಕ್ಷಾ ಕೇಂದ್ರದಲ್ಲಿ ನಾನು ಇದನ್ನು ಅನುಭವಿಸಿದೆ. ನಮ್ಮ ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂತಹ ಬೃಹತ್ ತಂತ್ರಜ್ಞಾನವನ್ನು ಬಳಸಿರುವುದು ಅಚ್ಚರಿಯುಂಟುಮಾಡಿದೆ. ಈ ಕ್ಷೇತ್ರದೊಂದಿಗೆ ನನಗೆ ಮೊದಲಿನಿಂದಲೂ ಒಡನಾಟವಿದೆ, ಆದರೆ ನಿನ್ನೆ ನಾನು ವಿಶೇಷವಾಗಿ ಗಾಂಧಿನಗರಕ್ಕೆ ಇದನ್ನು ನೋಡಲು ಹೋಗಿದ್ದೆ ”ಎಂದು ಅವರು ಹೇಳಿದರು. ವಿದ್ಯಾ ಸಮೀಕ್ಷಾ ಕೇಂದ್ರವು ದೇಶಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳನ್ನು ತರಬಲ್ಲದು ಎಂದು ಪ್ರಧಾನಿ ಒತ್ತಿ ಹೇಳಿದರು. “ವಿದ್ಯಾ ಸಮೀಕ್ಷಾ ಕೇಂದ್ರವನ್ನು ಅಧ್ಯಯನ ಮಾಡಲು ನಾನು ಭಾರತ ಸರ್ಕಾರದ ಸಂಬಂಧಿಸಿದ ಸಚಿವಾಲಯಗಳು ಮತ್ತು ಅಧಿಕಾರಿಗಳನ್ನು ಕೇಳುತ್ತೇನೆ. ವಿವಿಧ ರಾಜ್ಯಗಳ ಸಂಬಂಧಪಟ್ಟ ಇಲಾಖೆಗಳು ಸಹ ಗಾಂಧಿ ನಗರಕ್ಕೆ ಬಂದು ಉಪಕ್ರಮವನ್ನು ಅಧ್ಯಯನ ಮಾಡಬೇಕು” ಎಂದು ಪ್ರಧಾನಿ ಮೋದಿ ಹೇಳಿದರು.

ತಮ್ಮ ತವರು ರಾಜ್ಯ ಗುಜರಾತ್‌ಗೆ ಮೂರು ದಿನಗಳ ಭೇಟಿಗಾಗಿ ಸೋಮವಾರ ಅಹಮದಾಬಾದ್‌ಗೆ ಆಗಮಿಸಿದ ಪ್ರಧಾನಿ, ಬನಾಸ್ ಡೈರಿಯನ್ನು ಶ್ಲಾಘಿಸಿದರು ಮತ್ತು ಸ್ಥಳೀಯ ರೈತರ ಆದಾಯವನ್ನು ಹೆಚ್ಚಿಸಲು ಇತರ ಸಂಪನ್ಮೂಲಗಳನ್ನು ಬಳಸಬಹುದು ಎಂದು ಇದು ಸಾಬೀತುಪಡಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಕ್ರಿಶ್ಚಿಯನ್ ಮಹಿಳೆ, ಮುಸ್ಲಿಂ ಡಿವೈಎಫ್‌ಐ ನಾಯಕನ ಅಂತರ್‌ಧರ್ಮೀಯ ಸಂಬಂಧದಲ್ಲಿ ಹಸ್ತಕ್ಷೇಪಕ್ಕೆ ನಿರಾಕರಿಸಿದ ಕೇರಳ ಹೈಕೋರ್ಟ್

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?