India Weather Updates: ತಮಿಳುನಾಡಿನ 11 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಬೆಂಗಳೂರಲ್ಲೂ ಮೋಡಕವಿದ ವಾತಾವರಣ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ವಾತಾವಾರಣ ನಿರ್ಮಾಣವಾಗಿದೆ. ಫೆಬ್ರವರಿ 2 ರಂದು ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್​ನಲ್ಲಿ ಸೇರಿದಂತೆ 11 ಜಿಲ್ಲೆಗಳಲ್ಲಿ  ಮಳೆಯಾಗುವ ಸಾಧ್ಯತೆ ಇದೆ

India Weather Updates: ತಮಿಳುನಾಡಿನ 11 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಬೆಂಗಳೂರಲ್ಲೂ ಮೋಡಕವಿದ ವಾತಾವರಣ
ಮಳೆ
Follow us
ನಯನಾ ರಾಜೀವ್
|

Updated on: Feb 02, 2023 | 7:23 AM

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ವಾತಾವಾರಣ ನಿರ್ಮಾಣವಾಗಿದೆ. ಫೆಬ್ರವರಿ 2 ರಂದು ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್​ನಲ್ಲಿ ಸೇರಿದಂತೆ 11 ಜಿಲ್ಲೆಗಳಲ್ಲಿ  ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನ್ಯಾಕುಮಾರಿ, ತೂತುಕುಡಿ, ರಾಮನಾಥಪುರಂ, ಶಿವಗಂಗೈ, ಪುದುಕೊಟ್ಟೈ, ನಾಗಪಟ್ಟಣಂ, ಕಡಲೂರು ಪ್ರದೇಶಗಳಲ್ಲಿ ಕೂಡ ಮಳೆಯಾಗಲಿದೆ.

ಚೆನ್ನೈನಲ್ಲಿ ಮುಂದಿನ 48 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಗರಿಷ್ಠ ತಾಪಮಾನ 30-31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ.

ಫೆಬ್ರವರಿ 4 ರಂದು ಗಂಟೆಗೆ 40 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆಗಾಗ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಕುಮಾರಿಕಡಲ್ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಮಿಳುನಾಡಿನಲ್ಲಿ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ಕೆಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Gulmarg Avalanche: ಜಮ್ಮು ಕಾಶ್ಮೀರದ ಗುಲ್ಮಾರ್ಗ್​ನಲ್ಲಿ ಭಾರೀ ಹಿಮಕುಸಿತ, ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್