ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ವಾತಾವಾರಣ ನಿರ್ಮಾಣವಾಗಿದೆ. ಫೆಬ್ರವರಿ 2 ರಂದು ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಸೇರಿದಂತೆ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನ್ಯಾಕುಮಾರಿ, ತೂತುಕುಡಿ, ರಾಮನಾಥಪುರಂ, ಶಿವಗಂಗೈ, ಪುದುಕೊಟ್ಟೈ, ನಾಗಪಟ್ಟಣಂ, ಕಡಲೂರು ಪ್ರದೇಶಗಳಲ್ಲಿ ಕೂಡ ಮಳೆಯಾಗಲಿದೆ.
ಚೆನ್ನೈನಲ್ಲಿ ಮುಂದಿನ 48 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಗರಿಷ್ಠ ತಾಪಮಾನ 30-31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ.
ಫೆಬ್ರವರಿ 4 ರಂದು ಗಂಟೆಗೆ 40 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆಗಾಗ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಕುಮಾರಿಕಡಲ್ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಮಿಳುನಾಡಿನಲ್ಲಿ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ಕೆಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆಯಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Gulmarg Avalanche: ಜಮ್ಮು ಕಾಶ್ಮೀರದ ಗುಲ್ಮಾರ್ಗ್ನಲ್ಲಿ ಭಾರೀ ಹಿಮಕುಸಿತ, ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ
ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ