AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Rain Updates: ದೆಹಲಿಯಲ್ಲಿ ಮುಂದಿನ 12 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಮುಂದಿನ 12 ಗಂಟೆಗಳಲ್ಲಿ ದೆಹಲಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

India Rain Updates: ದೆಹಲಿಯಲ್ಲಿ ಮುಂದಿನ 12 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಣೆ
ದೆಹಲಿ ಮಳೆ (ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Jan 30, 2023 | 7:33 AM

Share

ಮುಂದಿನ 12 ಗಂಟೆಗಳಲ್ಲಿ ದೆಹಲಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.ಜನವರಿ 30 ರಂದು ದೆಹಲಿಯ ಎನ್​ಸಿಆರ್​ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನರೇಲಾ, ಬವಾನಾ, ಅಲಿಪುರ್, ಕಂಜಾವಾಲಾ, ಜಾಫರ್​ಪುರ್, ನಜಫ್​ಗಢ, ಇಂಡಿಯಾ ಗೇಟ್, ಅಕ್ಷರಧಾಮ, ಸಫ್ದರ್​ಗಂಜ್, ನೆಹರೂ ಸ್ಟೇಡಿಯಂ, ಲಜಪತ್ ಕಾಲೊನಿ, ಛತ್ತರ್​ಪುರ್, ತುಘಲಕಾಬಾದ್, ಮಾಳವೀಯನಗರ, ದೇರಮಂಡಿ ಪ್ರದೇಶದಲ್ಲಿ ಮಳೆಯಾಗಲಿದೆ.

ಹರ್ಯಾಣದ ಭಿವಾನಿ, ಉತ್ತರಪ್ರದೇಶದ ಕಿಥೋರ್, ಗುರ್ಮುಕ್ತೇಶ್ವರ್, ಹಾಪುರ್ ಮತ್ತು ಗುಲಾಟಿಯಲ್ಲಿ ಲಘು ಮಳೆಯಾಗಲಿದೆ. ಹರ್ಯಾಣದ ಜಿಂದ್, ಗೊಹಾನಾ, ಹಂಸಿ, ರೋಹ್ಟಕ್, ಚರ್ಖಿ ದಾದ್ರಿ, ಕೊಸಾಲಿ, ಉತ್ತರ ಪ್ರದೇಶದ ಬಿಜ್ನೌರ್, ಸಕೋಟಿ ತಾಂಡಾ, ಹಸ್ತಿನಾಪುರ, ಮೀರತ್, ಮೋದಿನಗರ ಮತ್ತು ರಾಜಸ್ಥಾನದ ಪಿಲಾನಿಯಲ್ಲಿ ತಡರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಓದಿ: Karnataka Weather Today: ಬೆಂಗಳೂರು ಸೇರಿ ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆ

ದೆಹಲಿಯಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗಲಿದ್ದು, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರೋಹ್ಟಾಂಗ್ ಪಾಸ್, ಕುಂಜಮ್ ಪಾಸ್, ಬರಾಲಾಚಾ ಸೇರಿದಂತೆ ಇತರೆ ಬೆಟ್ಟಗಳಲ್ಲಿ ಭಾರಿ ಹಿಮಪಾತವಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಚಳಿ ಹೆಚ್ಚಾಗಿದೆ, ಸೋಮವಾರವೂ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಿಮಪಾತದ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಆರು ಜಿಲ್ಲೆಗಳಲ್ಲಿ ಮಳೆ ಹಾಗೂ ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರದಲ್ಲಿ ಸೋಮವಾರ ಭಾರಿ ಮಳೆ ಹಾಗೂ ಹಿಮಪಾತವಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಡೆಹ್ರಾಡೂನ್, ತೆಹ್ರಿ, ನೈನಿತಾಲ್, ಚಂಪಾವತ್, ಉಧಮ್​ಸಿಂಗ್​ ನಗರ, ಹರಿದ್ವಾರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ