India Rain Updates: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ದೆಹಲಿಯಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್​ ಘೋಷಣೆ

|

Updated on: Mar 20, 2023 | 7:39 AM

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ದೆಹಲಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

India Rain Updates: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ದೆಹಲಿಯಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್​ ಘೋಷಣೆ
ಮಳೆ
Image Credit source: IndiaToday
Follow us on

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ದೆಹಲಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಔರಾದ್, ಚಿಂತಾಮಣಿ, ರಾಯಲ್ಪಾಡು, ಗೇರುಸೊಪ್ಪ, ಚಿಂಚೋಳಿ, ಮನ್ನಾಳಿ, ಸಿಂದಗಿ, ಸೈದಾಪುರ, ಬ್ರಹ್ಮಾವರ, ಬೀದರ್, ಹುಮನಾಬಾದ್, ಅಫಜಲ್​ಪುರ, ರಾಯಚೂರು, ಮಧುಗಿರಿ, ಕುಡತಿನಿ, ಹರದನಹಳ್ಳಿಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather Updates: ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರಿನ ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.8 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಗುಡುಗು, ಮೋಡ ಕವಿದ ವಾತಾವರಣ ಮತ್ತು ಮಳೆಯ ನಂತರ, ರಾಜಧಾನಿಯ ಜನರಿಗೆ ಬಿಸಿಲಿಗೆ ಪರಿಹಾರ ಸಿಕ್ಕಿದೆ, ಸೋಮವಾರ ಬೆಳಿಗ್ಗೆ ತಾಪಮಾನ ಸುಮಾರು 17 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ದಿನದ ತಾಪಮಾನವು 26 ಡಿಗ್ರಿ ಸೆಲ್ಸಿಯಸ್ ಎಂದು ತಿಳಿಸಲಾಗಿದೆ. ಕಳೆದ ಎರಡು ದಿನಗಳಂತೆ ಇಂದು ಕೂಡ ದೆಹಲಿ ಎನ್‌ಸಿಆರ್ ಮೋಡ ಕವಿದ ವಾತಾವರಣವಿರುತ್ತದೆ. ಜೋರಾದ ಗಾಳಿ ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ.

ಗುರುಗ್ರಾಮ, ಗೌತಮ್ ಬುದ್ಧ ನಗರ ಮತ್ತು ಫರಿದಾಬಾದ್‌ಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಆಗ್ನೇಯ, ದಕ್ಷಿಣ ಮತ್ತು ಈಶಾನ್ಯ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಕೆಲವೆಡೆ ಲಘು ಮಳೆ ಮತ್ತು ಆಲಿಕಲ್ಲು ಮಳೆಯೂ ಆಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ