AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2036ರ ಒಲಿಂಪಿಕ್ಸ್ ಆಯೋಜಿಸಲು ಭಾರತ ಸಿದ್ಧ; ಉತ್ತರಾಖಂಡದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅಮಿತ್ ಶಾ ಘೋಷಣೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕ್ರೀಡಾ ಜಗತ್ತಿನಲ್ಲಿ ಭಾರತಕ್ಕೆ ಉಜ್ವಲ ಭವಿಷ್ಯವಿದೆ. 2036ರಲ್ಲಿ ಒಲಿಂಪಿಕ್ಸ್ ಆಯೋಜಿಸಲು ನಮ್ಮ ದೇಶ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಈ ವೇಳೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿ.ಟಿ ಉಷಾ ಅವರು ಮುಂದಿನ ಆವೃತ್ತಿಯ ಕ್ರೀಡಾಕೂಟವನ್ನು ಆಯೋಜಿಸಲಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರಿಗೆ ಧ್ವಜವನ್ನು ಹಸ್ತಾಂತರಿಸಿದರು.

2036ರ ಒಲಿಂಪಿಕ್ಸ್ ಆಯೋಜಿಸಲು ಭಾರತ ಸಿದ್ಧ; ಉತ್ತರಾಖಂಡದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅಮಿತ್ ಶಾ ಘೋಷಣೆ
Amit Shah
ಸುಷ್ಮಾ ಚಕ್ರೆ
|

Updated on: Feb 14, 2025 | 7:52 PM

Share

ಉತ್ತರಾಖಂಡ: ಭಾರತವು ಕ್ರೀಡೆಯಲ್ಲಿ ಅತ್ಯಂತ ಉಜ್ವಲ ಭವಿಷ್ಯವನ್ನು ಹೊಂದಿದೆ ಎಂದು ನಾನು ಧೈರ್ಯವಾಗಿ ಹೇಳುತ್ತೇನೆ. ನಾವು 2036ರಲ್ಲಿ ಯಶಶ್ವಿಯಾಗಿ ಒಲಿಂಪಿಕ್ಸ್ ಅನ್ನು ಆಯೋಜಿಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಭಾರತಕ್ಕೆ ಕ್ರೀಡಾ ಜಗತ್ತಿನಲ್ಲಿ ಅತ್ಯಂತ ಉಜ್ವಲ ಭವಿಷ್ಯವಿದೆ ಎಂದಿದ್ದಾರೆ.

“ಕೇವಲ ರಾಷ್ಟ್ರೀಯ ಕ್ರೀಡಾಕೂಟದಿಂದಾಗಿ ಮಾತ್ರವಲ್ಲದೆ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳ ಪ್ರದರ್ಶನ ಮತ್ತು ಯಶಸ್ವಿ ಕ್ರೀಡಾಕೂಟವನ್ನು ಆಯೋಜಿಸುವಲ್ಲಿ ಉತ್ತರಾಖಂಡದ ಸಿಎಂ ಧಾಮಿ ಅವರ ನಿರಂತರ ಪ್ರಯತ್ನಗಳಿಂದಾಗಿ ‘ದೇವ ಭೂಮಿ’ಯಾದ ಈ ರಾಜ್ಯ ‘ಕ್ರೀಡಾ ಭೂಮಿ’ ಆಗಿ ರೂಪಾಂತರಗೊಂಡಿದೆ ಎಂದು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿ ಪರಿಶೀಲಿಸಿದ ಅಮಿತ್ ಶಾ; ಭಯೋತ್ಪಾದನೆ ವಿರುದ್ಧ ಹೋರಾಟ ಚುರುಕುಗೊಳಿಸಲು ಆದೇಶ

ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಪ್ರಯತ್ನಗಳಿಗೆ ಧನ್ಯವಾದಗಳು, ಉತ್ತರಾಖಂಡವು ಕಳೆದ ಕ್ರೀಡಾಕೂಟದಲ್ಲಿ ಒಟ್ಟಾರೆ ಶ್ರೇಯಾಂಕದಲ್ಲಿ 21ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಜಿಗಿದಿದೆ. ‘ದೇವ ಭೂಮಿ’ ‘ಕ್ರೀಡಾ ಭೂಮಿ’ ಆಗಲು ದಾರಿ ಮಾಡಿಕೊಟ್ಟ ಎಲ್ಲಾ ಕ್ರೀಡಾಪಟುಗಳನ್ನು ನಾನು ಅಭಿನಂದಿಸುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಉತ್ತರಾಖಂಡವು ಕೇವಲ ದೇವಭೂಮಿಯಲ್ಲ, ಕ್ರೀಡಾ ಭೂಮಿಯೂ ಆಗಿದೆ ಎಂದು ದೇಶಕ್ಕೆ ಸಾಬೀತುಪಡಿಸಿದೆ. ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಯಾವುದೇ ತೊಂದರೆ ಎದುರಿಸದಂತೆ ರಾಜ್ಯವು ನೋಡಿಕೊಂಡಿದೆ. ಭಾರತ ಕ್ರೀಡಾ ಕೇಂದ್ರವಾಗಲು ಇದು ಆರಂಭದ ಹೆಜ್ಜೆಯಾಗಿದೆ ಎಂದು ಕ್ರೀಡಾ ಸಚಿವ ಮಾಂಡವಿಯಾ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ