ರಷ್ಯಾ-ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಹಾಯ; ಪುಟಿನ್ ಜೊತೆ ಪ್ರಧಾನಿ ಮೋದಿ ಮಾತು

BRICS Summit: ರಷ್ಯಾದ ಕಜಾನ್‌ನಲ್ಲಿ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. ಈ ವೇಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ನರೇಂದ್ರ ಮೋದಿ, ರಷ್ಯಾ- ಉಕ್ರೇನ್ ಯುದ್ಧದ ಬಗ್ಗೆ ಮತ್ತೆ ಮಾತುಕತೆ ನಡೆಸಿದ್ದಾರೆ. ಈ ಸಂಘರ್ಷವನ್ನು ಶಾಂತಿಯುವತವಾಗಿ ಪರಿಹರಿಸಲು ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡಲು ಭಾರತ ಸಿದ್ಧವಿದೆ ಎಂದು ಮೋದಿ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಹಾಯ; ಪುಟಿನ್ ಜೊತೆ ಪ್ರಧಾನಿ ಮೋದಿ ಮಾತು
ಮೋದಿಯವರನ್ನು ತಬ್ಬಿಕೊಂಡು ಬರಮಾಡಿಕೊಂಡ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
Follow us
ಸುಷ್ಮಾ ಚಕ್ರೆ
|

Updated on:Oct 22, 2024 | 4:55 PM

ಕಜಾನ್: ಬ್ರಿಕ್ಸ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯನ್ನರು ವಿಶೇಷವಾಗಿ ಸ್ವಾಗತ ಕೋರಿದರು. ಬಳಿಕ ಮೋದಿಯವರನ್ನು ತಬ್ಬಿಕೊಂಡು ಬರಮಾಡಿಕೊಂಡ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮೋದಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ನಾನು ನಿಮ್ಮೊಂದಿಗೆ ನಿರಂತರ ಸಂವಹನವನ್ನು ನಿರ್ವಹಿಸಿದ್ದೇನೆ. ನಾನು ಮೊದಲೇ ಹೇಳಿದಂತೆ, ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸುವುದರ ಬಗ್ಗೆ ನಮಗೆ ನಂಬಿಕೆಯಿದೆ. ಮಾನವೀಯ ಪ್ರಯತ್ನಗಳಿಗೆ ಆದ್ಯತೆ ನೀಡುವ ಮೂಲಕ ಶಾಂತಿ ಮತ್ತು ಸ್ಥಿರತೆಯ ಸ್ಥಾಪನೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಭವಿಷ್ಯದಲ್ಲಿ ಅದಕ್ಕೆ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಭಾರತ ಸಿದ್ಧವಿದೆ ಎಂದು ಪುಟಿನ್​ಗೆ ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಕಜಾನ್ ನಗರವನ್ನು ತಲುಪಿದ್ದಾರೆ. ಕಜಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬ್ರಿಕ್ಸ್ ಶೃಂಗಸಭೆಯು ಕಜಾನ್‌ನಲ್ಲಿ ಅಕ್ಟೋಬರ್ 23 ಮತ್ತು 24ರಂದು ನಡೆಯಲಿದೆ. ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯುತ್ತಿವೆ.

ಇದನ್ನೂ ಓದಿ: ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ

ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರು ರಷ್ಯಾದೊಂದಿಗೆ ಭಾರತವು ಐತಿಹಾಸಿಕ ಸಂಬಂಧವನ್ನು ಹೊಂದಿದೆ ಎಂದು ಹೇಳಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ರಷ್ಯಾಕ್ಕೆ ಬಂದಿರುವುದು ಭಾರತ- ರಷ್ಯಾದ ನಿಕಟ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಇದೇ ವೇಳೆ ರಷ್ಯಾ-ಉಕ್ರೇನ್ ಯುದ್ಧದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಬೇಕು. ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳಬೇಕು. ರಾಜತಾಂತ್ರಿಕತೆಯು ಸಂಘರ್ಷಕ್ಕೆ ಏಕೈಕ ಪರಿಹಾರವಾಗಿದೆ ಎಂದು ಮೋದಿ ಪುನರುಚ್ಛರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:50 pm, Tue, 22 October 24

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್