ಕಜಾನ್: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯನ್ನರು ವಿಶೇಷವಾಗಿ ಸ್ವಾಗತ ಕೋರಿದರು. ಬಳಿಕ ಮೋದಿಯವರನ್ನು ತಬ್ಬಿಕೊಂಡು ಬರಮಾಡಿಕೊಂಡ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮೋದಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ನಾನು ನಿಮ್ಮೊಂದಿಗೆ ನಿರಂತರ ಸಂವಹನವನ್ನು ನಿರ್ವಹಿಸಿದ್ದೇನೆ. ನಾನು ಮೊದಲೇ ಹೇಳಿದಂತೆ, ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸುವುದರ ಬಗ್ಗೆ ನಮಗೆ ನಂಬಿಕೆಯಿದೆ. ಮಾನವೀಯ ಪ್ರಯತ್ನಗಳಿಗೆ ಆದ್ಯತೆ ನೀಡುವ ಮೂಲಕ ಶಾಂತಿ ಮತ್ತು ಸ್ಥಿರತೆಯ ಸ್ಥಾಪನೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಭವಿಷ್ಯದಲ್ಲಿ ಅದಕ್ಕೆ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಭಾರತ ಸಿದ್ಧವಿದೆ ಎಂದು ಪುಟಿನ್ಗೆ ಹೇಳಿದ್ದಾರೆ.
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಕಜಾನ್ ನಗರವನ್ನು ತಲುಪಿದ್ದಾರೆ. ಕಜಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬ್ರಿಕ್ಸ್ ಶೃಂಗಸಭೆಯು ಕಜಾನ್‌ನಲ್ಲಿ ಅಕ್ಟೋಬರ್ 23 ಮತ್ತು 24ರಂದು ನಡೆಯಲಿದೆ. ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯುತ್ತಿವೆ.
Sharing my remarks during meeting with President Putin.https://t.co/6cd8COO5Vm
— Narendra Modi (@narendramodi) October 22, 2024
ಇದನ್ನೂ ಓದಿ: ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರು ರಷ್ಯಾದೊಂದಿಗೆ ಭಾರತವು ಐತಿಹಾಸಿಕ ಸಂಬಂಧವನ್ನು ಹೊಂದಿದೆ ಎಂದು ಹೇಳಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ರಷ್ಯಾಕ್ಕೆ ಬಂದಿರುವುದು ಭಾರತ- ರಷ್ಯಾದ ನಿಕಟ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.
ಇದೇ ವೇಳೆ ರಷ್ಯಾ-ಉಕ್ರೇನ್ ಯುದ್ಧದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಬೇಕು. ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳಬೇಕು. ರಾಜತಾಂತ್ರಿಕತೆಯು ಸಂಘರ್ಷಕ್ಕೆ ಏಕೈಕ ಪರಿಹಾರವಾಗಿದೆ ಎಂದು ಮೋದಿ ಪುನರುಚ್ಛರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:50 pm, Tue, 22 October 24