ಪಾಕಿಸ್ತಾನ ದಾಳಿ ಮಾಡಿದರೆ ಪ್ರತಿದಾಳಿಗೆ ಸಿದ್ಧ; ಜಾಗತಿಕ ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ ಅಜಿತ್ ದೋವಲ್ ಮಾಹಿತಿ

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಭಾರತೀಯ ಪಡೆಗಳು ವಾಯುದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಲವಾರು ದೇಶಗಳಲ್ಲಿನ ರಾಷ್ಟ್ರೀಯ ಭದ್ರತಾ ಸಲಹೆಗಾರರೊಂದಿಗೆ ಮಾತನಾಡಿದ್ದಾರೆ. ಭಾರತ ನಡೆಸಿದ ವಾಯುದಾಳಿಯ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ. ಭಾರತವು ಉದ್ವಿಗ್ನತೆಯನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿಲ್ಲ. ಆದರೆ ಪಾಕಿಸ್ತಾನ ಹಾಗೆ ಮಾಡಿದರೆ ಖಂಡಿತ ನಾವು ಪ್ರತಿದಾಳಿ ಮಾಡಲು ಸಿದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ದಾಳಿ ಮಾಡಿದರೆ ಪ್ರತಿದಾಳಿಗೆ ಸಿದ್ಧ; ಜಾಗತಿಕ ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ ಅಜಿತ್ ದೋವಲ್ ಮಾಹಿತಿ
Ajit Doval

Updated on: May 07, 2025 | 7:41 PM

ನವದೆಹಲಿ, ಮೇ 7: ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಾದ್ಯಂತ 9 ಭಯೋತ್ಪಾದಕ ಸಂಬಂಧಿತ ಸ್ಥಳಗಳ ಮೇಲೆ ಬುಧವಾರ ಗುರಿಯಿಟ್ಟು ದಾಳಿ ನಡೆಸಿದ ಆಪರೇಷನ್ ಸಿಂಧೂರ್‌ನ ವಿವರಗಳನ್ನು ಹಂಚಿಕೊಳ್ಳಲು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಪ್ರಮುಖ ರಾಷ್ಟ್ರಗಳ ಭದ್ರತಾ ಸಲಹೆಗಾರರ ಜೊತೆ ಮಾತುಕತೆ ನಡೆಸಿದ್ದಾರೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಯುಕೆ ಎನ್‌ಎಸ್‌ಎ ಜೊನಾಥನ್ ಪೊವೆಲ್, ಸೌದಿ ಎನ್‌ಎಸ್‌ಎ ಮುಸೈದ್ ಅಲ್ ಐಬನ್, ಯುಎಇ ಎನ್‌ಎಸ್‌ಎ ಶೇಖ್ ತಹ್ನೂನ್, ಯುಎಇಯ ರಾಷ್ಟ್ರೀಯ ಭದ್ರತಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಅಲಿ ಅಲ್ ಶಮ್ಸಿ ಮತ್ತು ಜಪಾನ್‌ನ ಎನ್‌ಎಸ್‌ಎ ಮಸಟಕ ಒಕಾನೊ ಸೇರಿದಂತೆ ಉನ್ನತ ಭದ್ರತಾ ಅಧಿಕಾರಿಗಳೊಂದಿಗೆ ಅಜಿತ್ ದೋವಲ್ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಅಜಿತ್ ದೋವಲ್ ರಷ್ಯಾದ ಎನ್‌ಎಸ್‌ಎ ಸೆರ್ಗೆಯ್ ಶೋಯಿಗು, ಚೀನಾದ ಕಮ್ಯುನಿಸ್ಟ್ ಪಕ್ಷದ ರಾಜಕೀಯ ಬ್ಯೂರೋದ ಸದಸ್ಯರೂ ಆಗಿರುವ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್‌ರ ರಾಜತಾಂತ್ರಿಕ ಸಲಹೆಗಾರ ಎಮ್ಯಾನುಯೆಲ್ ಬೊನ್ನೆ ಅವರೊಂದಿಗೆ ಕೂಡ ಮಾತುಕತೆ ನಡೆಸಿದರು.

ಇದನ್ನೂ ಓದಿ: ಭಾರತದ ದಾಳಿ ಬಗ್ಗೆ ಮಹಿಳಾ ಅಧಿಕಾರಿಗಳಿಂದಲೇ ಮೋದಿ ಸುದ್ದಿಗೋಷ್ಠಿ ನಡೆಸಿದ್ದೇಕೆ?

ಇದನ್ನೂ ಓದಿ
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಎನ್‌ಎಸ್‌ಎ ಅಜಿತ್ ದೋವಲ್ ತನ್ನ ಸಹವರ್ತಿಗಳಿಗೆ ಭಯೋತ್ಪಾದನೆಯ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳು ಮತ್ತು ದಾಳಿಯ ವಿಧಾನದ ಬಗ್ಗೆ ವಿವರಿಸಿದ್ದಾರೆ ಎಂದು ವರದಿಯಾಗಿದೆ. ನಮಗೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸುವ ಉದ್ದೇಶವಿಲ್ಲ. ಆದರೆ, ವಿನಾಕಾರಣ ಪಾಕಿಸ್ತಾನ ನಮ್ಮನ್ನು ಕೆಣಕಿದರೆ ಖಂಡಿತವಾಗಿಯೂ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಅಜಿತ್ ದೋವಲ್ ಒತ್ತಿ ಹೇಳಿದರು.

ಇದನ್ನೂ ಓದಿ: ಪಾಕಿಸ್ತಾನದೊಳಗೆ ಅತಿದೂರ ಹೋಗಿ ಹೊಡೆತ ಕೊಟ್ಟಿದ್ದು ಇದೇ ಮೊದಲು; ಹಿಂದೆಲ್ಲಾ ಭಾರತ ಒಳನುಗ್ಗಿದ್ದು ಎಷ್ಟು ದೂರ?

ಭಾರತೀಯ ವಾಯುಪಡೆ ಮತ್ತು ಸೇನಾಪಡೆ ಮಂಗಳವಾರ ಮಧ್ಯರಾತ್ರಿ 1 ಗಂಟೆ ವೇಳೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ವಾಯುದಾಳಿ ನಡೆಸಿದೆ. ಇದರಲ್ಲಿ 80 ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ