ದೇಶದಲ್ಲಿ ಇಂದು 89 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲು; 714 ಮಂದಿ ಸಾವು

|

Updated on: Apr 03, 2021 | 11:57 AM

Covid Updates: ಇನ್ನು ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,23,92,260ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,64,110ಕ್ಕೆ ತಲುಪಿದೆ. ಶುಕ್ರವಾರದ ಹೊತ್ತಿಗೆ ಒಟ್ಟು 24,69,59,192ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ದೇಶದಲ್ಲಿ ಇಂದು 89 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲು; 714 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ದೇಶದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ದಿನದಿನಕ್ಕೂ ಹೆಚ್ಚುತ್ತಿದೆ. ಒಂದು ದಿನದಲ್ಲಿ ದಾಖಲಾಗುವ ಕೊವಿಡ್​ ಸೋಂಖಿತರ ಸಂಖ್ಯೆ ಏರುತ್ತಲೇ ಇದೆ. ಹಾಗೇ ಕಳೆದ 24ಗಂಟೆಯಲ್ಲಿ 89,129 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 714 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 44,202 ಜನರು ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ದತ್ತಾಂಶ ಬಿಡುಗಡೆ ಮಾಡಿದೆ. ಕಳೆದ ಆರು ತಿಂಗಳಿಂದ, ಒಂದು ದಿನದಲ್ಲಿ ಇಷ್ಟು ಪ್ರಮಾಣದ ಕೇಸ್​ಗಳು ದಾಖಲಾಗಿರಲಿಲ್ಲ. ಭಾರತದಲ್ಲಿ ಸದ್ಯ 6,58,909 ಸಕ್ರಿಯ ಪ್ರಕರಣಗಳು ಇವೆ.

ಇನ್ನು ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,23,92,260ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,64,110ಕ್ಕೆ ತಲುಪಿದೆ. ಶುಕ್ರವಾರದ ಹೊತ್ತಿಗೆ ಒಟ್ಟು 24,69,59,192ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಕೊರೊನಾ ಎರಡನೇ ಅಲೆ ಕೆಲವೇ ರಾಜ್ಯಗಳಲ್ಲಿ ಅತಿಹೆಚ್ಚಾಗಿ ಬಾಧಿಸುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಉತ್ತುಂಗಕ್ಕೇರಿದ್ದು, ಅಲ್ಲಿನ ಕೆಲವು ನಗರಗಳಿಗೆ ಅದಾಗಲೇ ಲಾಕ್​ಡೌನ್​ ಹೇರಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮಹಾರಾಷ್ಟ್ರ ಮತ್ತೊಮ್ಮೆ ಲಾಕ್​ಡೌನ್ ಆಗುವ ಸಾಧ್ಯತೆ ಹೆಚ್ಚಾಗಿದೆ.

ಭರದಿಂದ ಸಾಗುತ್ತಿದೆ ಲಸಿಕೆ ಅಭಿಯಾನ
ಇನ್ನೊಂದೆಡೆ ಕೊರೊನಾ ಲಸಿಕೆ ವಿತರಣೆ ಅಭಿಯಾನವೂ ಭರದಿಂದ ಸಾಗುತ್ತಿದೆ. ಈವರೆಗೆ 7.3 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಹಾಗೇ ಕಳೆದ 24 ಗಂಟೆಯಲ್ಲಿ 31 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ದೇಶದಲ್ಲಿ ಏಪ್ರಿಲ್​ 1ರಿಂದ ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಿದ್ದು, ಇದರಡಿಯಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊವಿಡ್​ ಲಸಿಕೆ ನೀಡಲಾಗುತ್ತಿದೆ.

India recorded above 89 thousand new corona cases in the last 24 hours

 

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

ರಾಜ್ಯದಲ್ಲಿ ಕೊರೊನಾ 2ನೇ ಅಲೆ: ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ, ಧಾರ್ಮಿಕ ಉತ್ಸವಕ್ಕೆ ನಿರ್ಬಂಧ​