India Covid Updates: ಭಾರತದಲ್ಲಿ 12,249 ಮಂದಿ ಕೊರೊನಾ ಸೋಂಕಿತರು ಪತ್ತೆ, 13 ಸಾವು

ದೇಶದಲ್ಲಿ ಕಳೆದ ಒಂದೆರಡು ವಾರಗಳಿಂದ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 12,249 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ.

India Covid Updates: ಭಾರತದಲ್ಲಿ 12,249 ಮಂದಿ ಕೊರೊನಾ ಸೋಂಕಿತರು ಪತ್ತೆ, 13 ಸಾವು
Coronavirus Cases In India
Edited By:

Updated on: Jun 22, 2022 | 9:45 AM

ನವದೆಹಲಿ: ದೇಶದಲ್ಲಿ ಕಳೆದ ಒಂದೆರಡು ವಾರಗಳಿಂದ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 12,249 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ. 9862 ಮಂದಿ ಗುಣಮುಖರಾಗಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 81,687 ಇದ್ದು ಪಾಸಿಟಿವಿಟಿ ದರ ಶೇ.3.94ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 12,28,291ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,96,45,99,906 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 524903ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 9862ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42725055ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು.
ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಮೊದಲು ಲಸಿಕೆಯನ್ನು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us