India Covid Updates: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,300 ಹೊಸ ಕೊರೊನಾ ಪ್ರಕರಣಗಳು ಪತ್ತೆ, 3 ಸಾವು

ಭಾರತದಲ್ಲಿ ಕೊರೊನಾ(Corona) ಪ್ರಕರಣಗಳು ಕ್ರಮೇಣವಾಗಿ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 1,300 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 140 ದಿನಗಳಲ್ಲೇ ಅತ್ಯಧಿಕ ಪ್ರಕರಣಗಳು ಇದಾಗಿದೆ.

India Covid Updates: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,300 ಹೊಸ ಕೊರೊನಾ ಪ್ರಕರಣಗಳು ಪತ್ತೆ, 3 ಸಾವು
ಕೊರೊನಾವೈರಸ್ ಪರೀಕ್ಷೆ

Updated on: Mar 23, 2023 | 11:59 AM

ಭಾರತದಲ್ಲಿ ಕೊರೊನಾ(Corona) ಪ್ರಕರಣಗಳು ಕ್ರಮೇಣವಾಗಿ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 1,300 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 140 ದಿನಗಳಲ್ಲೇ  ಅತ್ಯಧಿಕ ಪ್ರಕರಣ ಇದಾಗಿದೆ. ಭಾರತದಲ್ಲಿ 4.46 ಕೋಟಿ ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ, ಇದುವರೆಗೆ 5,30,816 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕ, ಗುಜರಾತ್, ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೇಶದಲ್ಲಿ 7,605 ಸಕ್ರಿಯ ಪ್ರಕರಣಗಳಿವೆ, ಕೋವಿಡ್ ಪತ್ತೆಗಾಗಿ ಇದುವರೆಗೆ ಒಟ್ಟು 92.06 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 89,078 ಪರೀಕ್ಷೆಗಳನ್ನು ನಡೆಸಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,60,997 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.

ಮತ್ತಷ್ಟು ಓದಿ:ರಾಜ್ಯದಲ್ಲಿ 115 ಹೆಚ್​3ಎನ್​2 ಪ್ರಕರಣ ಪತ್ತೆ, ಬೆಂಗಳೂರು ಒಂದರಲ್ಲೇ 30 ಸೋಂಕು ದೃಢ

ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಲ್ಯಾಬ್ ಕಣ್ಗಾವಲು, ಎಲ್ಲಾ ತೀವ್ರತರವಾದ ಉಸಿರಾಟದ ಕಾಯಿಲೆಯ ಪ್ರಕರಣಗಳ ಪರೀಕ್ಷೆ ಮತ್ತು ವೈರಸ್ ಹರಡುವಿಕೆಯನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು ಜೀನೋಮ್ ಅನುಕ್ರಮವನ್ನು ಹೆಚ್ಚಿಸುವಂತೆ ಕರೆ ನೀಡಿದರು.

ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚಿನ ಸಂಖ್ಯೆಯ H1N1 ಮತ್ತು H3N2 ಪ್ರಕರಣಗಳನ್ನು ಗಮನಿಸಿದ ಪ್ರಧಾನಿಯವರು ದೇಶದಲ್ಲಿ ಪ್ರಸ್ತುತ ಇನ್ಫ್ಲುಯೆನ್ಜಾ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us