India Covid Updates: ಭಾರತದಲ್ಲಿ ಹೊಸದಾಗಿ 15,940 ಮಂದಿಗೆ ಕೊರೊನಾ ಸೋಂಕು, 20 ಮಂದಿ ಸಾವು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,940 ಹೊಸ ಪ್ರಕರಣಗಳು ಪತ್ತೆಯಾಗಿವೆ. 20 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದವರಾಗಿದ್ದಾರೆ.

India Covid Updates: ಭಾರತದಲ್ಲಿ ಹೊಸದಾಗಿ 15,940 ಮಂದಿಗೆ ಕೊರೊನಾ ಸೋಂಕು, 20 ಮಂದಿ ಸಾವು
Coronavirus Cases In India
Edited By:

Updated on: Jun 25, 2022 | 9:46 AM

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,940 ಹೊಸ ಪ್ರಕರಣಗಳು ಪತ್ತೆಯಾಗಿವೆ. 20 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದವರಾಗಿದ್ದಾರೆ.

ಸಕ್ರಿಯ ಪ್ರಕರಣಗಳು 91,779 ಇದ್ದು ಪಾಸಿಟಿವಿಟಿ ದರ ಶೇ.4.39ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 15,73,341 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 10,932,96,94, ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 524974ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 12,475ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42761481ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಮೊದಲು ಲಸಿಕೆಯನ್ನು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Published On - 9:44 am, Sat, 25 June 22

Web contact

TV9 Kannada

Read More
Follow Us