India Covid Updates: ಭಾರತದಲ್ಲಿ 16,103 ಹೊಸ ಕೊರೊನಾ ಪ್ರಕರಣಗಳು ಪತ್ತೆ, 31 ಮಂದಿ ಸಾವು

| Updated By: ನಯನಾ ರಾಜೀವ್

Updated on: Jul 03, 2022 | 9:34 AM

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,103 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಹಿಂದಿನ ದಿನಕ್ಕೆ ಹೋಲಿಸಿದರೆ ಸಾವಿರಕ್ಕೂ ಕಡಿಮೆ ಪ್ರಕರಣಗಳು ಪತ್ತೆಯಾದಂತಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ 16,103 ಹೊಸ ಕೊರೊನಾ ಪ್ರಕರಣಗಳು ಪತ್ತೆ, 31 ಮಂದಿ ಸಾವು
Coronavirus Cases in India
Follow us on

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,103 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಹಿಂದಿನ ದಿನಕ್ಕೆ ಹೋಲಿಸಿದರೆ ಸಾವಿರಕ್ಕೂ ಕಡಿಮೆ ಪ್ರಕರಣಗಳು ಪತ್ತೆಯಾದಂತಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 2143ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 111711ಇದೆ. ಪಾಸಿಟಿವಿಟಿ ದರ ಶೇ.4.27ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 10,10,652ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,97,95,72,963 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525199ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 13,929ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42865519ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.