India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು

| Updated By: ನಯನಾ ರಾಜೀವ್

Updated on: Jul 06, 2022 | 9:47 AM

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 28 ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ ಕೊರೊನಾ ಸೋಂಕು ತಗುಲಿದವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು
Coronavirus Cases In India
Follow us on

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 28 ಮಂದಿ ಮೃತಪಟ್ಟಿದ್ದಾರೆ.
ಹೊಸದಾಗಿ ಕೊರೊನಾ ಸೋಂಕು ತಗುಲಿದವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 737ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 115212 ಇದೆ. ಪಾಸಿಟಿವಿಟಿ ದರ ಶೇ.3.56ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 9.95,810ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,98,20,86,763ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 52,52270ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 15,394ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42907327ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.