AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 16,866 ಮಂದಿ ಕೊರೊನಾ ಸೋಂಕಿತರು ಪತ್ತೆ, 41 ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ 16,866 ಹೊಸ ಪ್ರಕರಣಗಳು ಪತ್ತೆಯಾಗಿವೆ.

India Covid Updates: ಭಾರತದಲ್ಲಿ 16,866 ಮಂದಿ ಕೊರೊನಾ ಸೋಂಕಿತರು ಪತ್ತೆ, 41 ಸಾವು
Coronavirus Cases In India
TV9 Web
| Edited By: |

Updated on:Jul 25, 2022 | 9:42 AM

Share

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ 16,866 ಹೊಸ ಪ್ರಕರಣಗಳು ಪತ್ತೆಯಾಗಿವೆ. 41ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 150877 ಇದ್ದು ಪಾಸಿಟಿವಿಟಿ ದರ ಶೇ.7.03ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 16,82,390ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,02,17,66,615 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526074ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 18148ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43228670ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Published On - 9:40 am, Mon, 25 July 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ