ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,906 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ.
ಒಟ್ಟು 132457 ಸಕ್ರಿಯ ಪ್ರಕರಣಗಳಿವೆ, ಪಾಸಿಟಿವಿಟಿ ದರ ಶೇ.3.68ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,15,068 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1991279010 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.
ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 525519ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 15447ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43011874ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.
ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ.