India Covid Updates: ಭಾರತದಲ್ಲಿ 17,070 ಮಂದಿ ಕೊರೊನಾ ಸೋಂಕಿತರು ಪತ್ತೆ, 23 ಮಂದಿ ಸಾವು

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ಹೊಸ ಪ್ರಕರಣಗಳ ಸಂಖ್ಯೆಯು ಕೊಂಚ ತಗ್ಗಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.

India Covid Updates: ಭಾರತದಲ್ಲಿ 17,070 ಮಂದಿ ಕೊರೊನಾ ಸೋಂಕಿತರು ಪತ್ತೆ, 23 ಮಂದಿ ಸಾವು
Coronavirus Cases in India
Updated By: ನಯನಾ ರಾಜೀವ್

Updated on: Jul 01, 2022 | 10:04 AM

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ಹೊಸ ಪ್ರಕರಣಗಳ ಸಂಖ್ಯೆಯು ಕೊಂಚ ತಗ್ಗಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 17,070 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 2634 ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10,71,89 ಇದೆ. ಪಾಸಿಟಿವಿಟಿ ದರ ಶೇ.3.40ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,67,503ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,97,74,71,041 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525139ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 14,413ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42836906ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.