AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ದೇಶದಲ್ಲಿ 18,819 ಮಂದಿ ಕೊರೊನಾ ಸೋಂಕಿತರು ಪತ್ತೆ, 39 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,819 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 39 ಮಂದಿ ಮೃತಪಟ್ಟಿದ್ದಾರೆ.ದಿನ ಕಳೆದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ, ಸಾವಿನ ಸಂಖ್ಯೆಯೂ ಕೂಡ ಏರುಗತಿಯಲ್ಲಿ ಸಾಗಿದೆ.

India Covid Updates: ದೇಶದಲ್ಲಿ 18,819 ಮಂದಿ ಕೊರೊನಾ ಸೋಂಕಿತರು ಪತ್ತೆ, 39 ಮಂದಿ ಸಾವು
Coronavirus Cases In India
TV9 Web
| Edited By: |

Updated on:Jun 30, 2022 | 10:02 AM

Share

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,819 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 39 ಮಂದಿ ಮೃತಪಟ್ಟಿದ್ದಾರೆ.ದಿನ ಕಳೆದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ, ಸಾವಿನ ಸಂಖ್ಯೆಯೂ ಕೂಡ ಏರುಗತಿಯಲ್ಲಿ ಸಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 4953ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 104555ಇದೆ. ಪಾಸಿಟಿವಿಟಿ ದರ ಶೇ.4.16ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 14,17,217ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,97,61,91,554ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525116ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 13,827ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42822493ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Published On - 10:01 am, Thu, 30 June 22