India Covid Updates: ಭಾರತದಲ್ಲಿ 21,411 ಮಂದಿ ಕೊರೊನಾ ಸೋಂಕಿತರು ಪತ್ತೆ, 67 ಸಾವು

| Updated By: ನಯನಾ ರಾಜೀವ್

Updated on: Jul 23, 2022 | 9:49 AM

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ ಬರೋಬ್ಬರಿ 21,411 ಹೊಸ ಪ್ರಕರಣಗಳು ಪತ್ತೆಯಾಗಿವೆ

India Covid Updates: ಭಾರತದಲ್ಲಿ 21,411 ಮಂದಿ ಕೊರೊನಾ ಸೋಂಕಿತರು ಪತ್ತೆ, 67 ಸಾವು
Coronavirus
Follow us on

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ.
ದೇಶದಲ್ಲಿ ಬರೋಬ್ಬರಿ 21,411 ಹೊಸ ಪ್ರಕರಣಗಳು ಪತ್ತೆಯಾಗಿವೆ. 67 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 150100 ಇದ್ದು ಪಾಸಿಟಿವಿಟಿ ದರ ಶೇ.4.46ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 34,93,209ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,01,68,14,771 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525997ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 20726ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43192379ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.