AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid 19 Updates: ಭಾರತದಲ್ಲಿ 21,566 ಕೊರೊನಾ ಸೋಂಕಿತರು ಪತ್ತೆ, 45 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,566 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ.

India Covid 19 Updates: ಭಾರತದಲ್ಲಿ 21,566 ಕೊರೊನಾ ಸೋಂಕಿತರು ಪತ್ತೆ, 45 ಸಾವು
Coronavirus
TV9 Web
| Edited By: |

Updated on: Jul 21, 2022 | 9:49 AM

Share

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,566 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 1,48,881 ಇದೆ. ಪಾಸಿಟಿವಿಟಿ ದರ ಶೇ. 4.25ರಷ್ಟಿದೆ. ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,870ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 18,294ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ಕೊರೊನಾ ಸೋಂಕಿನ ವಿರುದ್ಧ ವಿಶ್ವದಲ್ಲೇ ಅತಿದೊಡ್ಡ ಲಸಿಕಾಕರಣವನ್ನು ಪ್ರಾರಂಭಿಸಿದ ಭಾರತವು 18 ತಿಂಗಳಲ್ಲಿ 200 ಕೋಟಿ ಡೋಸ್‌ ಲಸಿಕೆಯನ್ನು ನೀಡುವ ಮೂಲಕ ದಾಖಲೆಯನ್ನು ಸೃಷ್ಟಿಸಿದೆ.

ಭಾರತದಲ್ಲಿ 2021ರ ಜನವರಿ 16ರಂದು ಲಸಿಕೆಯನ್ನು ನೀಡಲು ಪ್ರಾರಂಭಿಸಲಾಯಿತು. ಈವರೆಗೆ ದೇಶದಲ್ಲಿ 200 ಕೋಟಿ ಡೋಸ್‌ ಲಸಿಕೆಯನ್ನು ನೀಡುವ ಮೂಲಕ ಮೈಲುಗಲ್ಲನ್ನು ಸಾಧಿಸಿದೆ. ಶನಿವಾರ ರಾತ್ರಿಯವರೆಗೆ ದೇಶಾದ್ಯಂತ 199.97 ಕೋಟಿ ಡೋಸ್‍ ಕೋವಿಡ್ ಲಸಿಕೆಗಳನ್ನು ನೀಡಲಾಗಿದ್ದು, ಇದರಲ್ಲಿ 5.48 ಕೋಟಿ ಬೂಸ್ಟರ್ ಡೋಸ್‍ಗಳು ಸೇರಿವೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ