India Covid Updates: ಭಾರತದಲ್ಲಿ 2226 ಮಂದಿಗೆ ಕೊರೊನಾ ಸೋಂಕು: 65 ಮಂದಿ ಸಾವು
Covid 19 Cases In India:ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 65 ಮಂದಿ ಮೃತಪಟ್ಟಿದ್ದಾರೆ.
ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 65 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,36,317ಕ್ಕೆ ಏರಿಕೆಯಾಗಿದೆ. ಹಾಗೆಯೇ ಕೋವಿಡ್ನಿಂದ ಸಾವನ್ನಪ್ಪಿದವರ ಸಂಖ್ಯೆ 524,413ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳಲ್ಲೂ ಇಳಿಕೆ ಕಂಡಿದ್ದು, 14,955 ಇದೆ. ಕಳೆದ 24 ಗಂಟೆಗಳಲ್ಲಿ 2,202 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ ಚೇತರಿಸಿಕೊಂಡಿರುವವರ ಸಂಖ್ಯೆ 4,25,97,003ಕ್ಕೆ ತಲುಪಿದೆ.
ದೇಶದಲ್ಲಿ 4,99,382 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದುವರೆಗೆ 84,63,54,733 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ಭಾರತದಲ್ಲಿ ಜನವರಿ 16ರಂದು ನಮ್ಮದೇ ದೇಶದಲ್ಲಿ ಸಿದ್ಧಪಡಿಸಿದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು. ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಇಲ್ಲಿಯವರೆಗೂ 1,92,28,66,524 ಮಂದಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ.
ಬಳಿಕ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದ್ದು, ನಂತರ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನಿಡಲಾಗಿತ್ತು. ಬಳಿಕ 18 ವರ್ಷದೊಳಗಿನವರಿಗೆ ಲಸಿಕೆ ಕೊಡಲಾಗಿತ್ತು, ಇದೀಗ ದೇಶದೆಲ್ಲೆಡೆ ಎಲ್ಲಅ ವಯಸ್ಸಿನವರಿಗೂ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ