Covid-19 India Update | ಭಾರತದಲ್ಲಿ ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

|

Updated on: Dec 01, 2020 | 10:57 AM

ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ 4,550 ಜನ ಗುಣಮುಖರಾಗಿದ್ದು, 61 ಮಂದಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಲ್ಲಿಯ ತನಕ 1,29,389 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

Covid-19 India Update | ಭಾರತದಲ್ಲಿ ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಭಾರತದಲ್ಲಿ ನಿನ್ನೆ 31,118 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು 482 ಜನ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಪ್ರಕರಣಗಳ ಸಂಖ್ಯೆ 94,62,809ಕ್ಕೆ ತಲುಪಿದರೆ, ಕೊವಿಡ್​ನಿಂದಾಗಿ ಸಾವಿಗೀಡಾದವರ ಸಂಖ್ಯೆ 1,37,621ರ ಗಡಿ ಮುಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ನೀಡಿದೆ.

ಸದ್ಯ ದೇಶದಲ್ಲಿ 4,35,603 ಸಕ್ರಿಯ ಪ್ರಕರಣಗಳಿದ್ದು ಇದುವರೆಗೆ 88,89,585 ಜನರು ಕೊವಿಡ್​ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಹೊಸದಾಗಿ 6 ಪಾಸಿಟಿವ್ ಪ್ರಕರಣಗಳು
ಇಂದು ಬೆಳಗ್ಗೆ ಲಭಿಸಿದ ಮಾಹಿತಿ ಪ್ರಕಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಹೊಸದಾಗಿ 6 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 4,710ಕ್ಕೆ ತಲುಪಿದೆ.

ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಈವರೆಗೆ 4,550 ಜನ ಗುಣಮುಖರಾಗಿದ್ದು, 61 ಮಂದಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಪ್ರಸ್ತುತ 99 ಸಕ್ರಿಯ ಪ್ರಕರಣಗಳಿದ್ದು ಇಲ್ಲಿಯ ತನಕ 1,29,389 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರೋಗ್ಯ ಸಚಿವರ ಮನೆ ಪಕ್ಕದಲ್ಲೆ ಕುರಿ ಸಂತೆ, ಕೊವಿಡ್ ನಿಯಮಗಳಿಗೆ ತಿಲಾಂಜಲಿ ಇಟ್ಟ ಜನತೆ