Coronavirus cases in India: ದೇಶದಲ್ಲಿ 36,083 ಹೊಸ ಕೊವಿಡ್ ಪ್ರಕರಣ, 493 ಮಂದಿ ಸಾವು

| Updated By: ರಶ್ಮಿ ಕಲ್ಲಕಟ್ಟ

Updated on: Aug 15, 2021 | 11:09 AM

Covid-19: . ಸಕ್ರಿಯ ಪ್ರಕರಣಗಳು 3.85 ಲಕ್ಷಕ್ಕೆ ಇಳಿಕೆಯಾಗಿದ್ದು, 3.13 ಕೋಟಿ ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಕೇರಳದಲ್ಲಿ 19,451 ಹೊಸ ಪ್ರಕರಣಗಳು, 105 ಸಾವುಗಳು ಹಾಗೂ ಮಹಾರಾಷ್ಟ್ರದಲ್ಲಿ 5,787 ಹೊಸ ಸೋಂಕುಗಳು ಮತ್ತು 177 ಸಾವುಗಳು ಸಂಭವಿಸಿವೆ.

Coronavirus cases in India: ದೇಶದಲ್ಲಿ 36,083 ಹೊಸ ಕೊವಿಡ್ ಪ್ರಕರಣ, 493 ಮಂದಿ ಸಾವು
ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ಇಲಾಖೆ ಬ್ಯಾನರ್
Follow us on

ದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 36,083 ಹೊಸ ಕೊವಿಡ್ -19 (Covid-19)  ಪ್ರಕರಣಗಳು ಮತ್ತು 493 ಸಾವುಗಳನ್ನು ವರದಿ ಮಾಡಿದೆ. ಇಲ್ಲಿಯವರೆಗೆ 3.21 ಕೋಟಿಗೂ ಹೆಚ್ಚು ಜನರು ಕೊರೊನಾವೈರಸ್ ಪಾಸಿಟಿವ್ ಪರೀಕ್ಷೆ ಮಾಡಿದ್ದಾರೆ. ಒಟ್ಟು ಸಾವಿನ ಸಂಖ್ಯೆ 4.31 ಲಕ್ಷವನ್ನು ಮೀರಿದೆ. ಸಕ್ರಿಯ ಪ್ರಕರಣಗಳು 3.85 ಲಕ್ಷಕ್ಕೆ ಇಳಿಕೆಯಾಗಿದ್ದು, 3.13 ಕೋಟಿ ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಕೇರಳದಲ್ಲಿ 19,451 ಹೊಸ ಪ್ರಕರಣಗಳು, 105 ಸಾವುಗಳು ಹಾಗೂ ಮಹಾರಾಷ್ಟ್ರದಲ್ಲಿ 5,787 ಹೊಸ ಸೋಂಕುಗಳು ಮತ್ತು 177 ಸಾವುಗಳು ಸಂಭವಿಸಿವೆ. ಇಲ್ಲಿಯವರೆಗೆ 54,38,46,290 ಕೊವಿಡ್ -19 ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ಏತನ್ಮಧ್ಯೆ, ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮುಂಚೂಣಿ ಮತ್ತು ಆರೋಗ್ಯ ಕಾರ್ಯಕರ್ತರು ಮತ್ತು ಕೊವಿಡ್ ಯೋಧರನ್ನು ಶ್ಲಾಘಿಸಿದರು.


ವಿಶ್ವದ ಅತಿದೊಡ್ಡ ಲಸಿಕೆ ಕಾರ್ಯಕ್ರಮದಲ್ಲಿ ಭಾರತ ಹೆಮ್ಮೆ ಪಡುತ್ತದೆ: ಮೋದಿ
ವಿಶ್ವದ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ಹೊಂದಿರುವುದಕ್ಕೆ ಭಾರತ ಹೆಮ್ಮೆಪಡುತ್ತದೆ ಮತ್ತು 54 ಕೋಟಿಗೂ ಅಧಿಕ ಜನರು ಈಗಾಗಲೇ ಕೊವಿಡ್ -19 ಲಸಿಕೆಗಳನ್ನು ತೆಗೆದುಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.

“ವಿಶ್ವದ ಅತಿದೊಡ್ಡ ಕೊವಿಡ್ ಲಸಿಕೆ ಕಾರ್ಯಕ್ರಮವು ಭಾರತದಲ್ಲಿ ನಡೆಯುತ್ತಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. 54 ಕೋಟಿಗೂ ಹೆಚ್ಚು ಜನರು ಈಗಾಗಲೇ ಲಸಿಕೆ ಪಡೆದುಕೊಂಡಿದ್ದಾರೆ” ಎಂದು ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದಾರೆ.

ದೇಶದಲ್ಲಿ ಲಸಿಕೆ ತಯಾರಿಕೆಯಲ್ಲಿ ತೊಡಗಿರುವವರನ್ನು ಶ್ಲಾಘಿಸಿದ ಮೋದಿ ಮತ್ತು ಕೊರೊನಾವೈರಸ್ ವಿರುದ್ಧ ಲಸಿಕೆಗಳಿಗಾಗಿ ಭಾರತವು ಹೊರಗಿನ ದೇಶಗಳನ್ನು ಅವಲಂಬಿಸಬೇಕಾಗಿಲ್ಲ ಎಂದು ಹೇಳಿದರು. “ನಾವು ಭಾರತದ 100 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುವಾಗ ಆತ್ಮನಿರ್ಭರ ಭಾರತವನ್ನು ನಿರ್ಮಿಸುವ ಗುರಿಯನ್ನು ನಾವು ಪೂರೈಸುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಪ್ರಧಾನಿ ಮೋದಿ ಹೇಳಿದರು.

ಕೊವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ  ವೈದ್ಯರು, ದಾದಿಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ಮೋದಿ ಶ್ಲಾಘಿಸಿದ್ದಾರೆ.  CoWIN ಆಪ್​​ನ್ನು  ಹೊಗಳಿದ ಮೋದಿ ಇದು ವಿಶ್ವದ ಗಮನ ಸೆಳೆಯುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:  Independence day 2021: ಸ್ವಾತಂತ್ರ್ಯೋತ್ಸವದ ಅಂಗವಾಗಿ ಗೂಗಲ್ ಡೂಡಲ್ ವಿಶೇಷ ಗೌರವ

ಇದನ್ನೂ ಓದಿ:  75th Indian Independence Day: ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಸಹಾಯ ಮಾಡಿದ ವೀರ ಮಹಿಳೆಯರನ್ನು ನಾವು ನೆನೆಯಲೇ ಬೇಕು

(India records 36083 new Covid-19 cases 493 deaths in last 24 hours as per data from the Union Health Ministry)