AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 4,270 ಮಂದಿಗೆ ಕೊರೊನಾ ಸೋಂಕು, 15 ಮಂದಿ ಸಾವು

ದೇಶದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4270 ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಮೃತಪಟ್ಟಿರುವ

India Covid Updates: ಭಾರತದಲ್ಲಿ 4,270 ಮಂದಿಗೆ ಕೊರೊನಾ ಸೋಂಕು, 15 ಮಂದಿ ಸಾವು
Corona Cases In India
TV9 Web
| Edited By: |

Updated on:Jun 05, 2022 | 10:20 AM

Share

ದೇಶದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4270 ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,052ಕ್ಕೆ ಇಳಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,76,817ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,692ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,619 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,28,073ಕ್ಕೆ ತಲುಪಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,94,09,46,157 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,45,814 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,22,09,788 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ದೇಶಕ್ಕೆ ಸಂಬಂಧಿಸಿದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:19 am, Sun, 5 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ