Coronavirus cases in India: 44,658 ಹೊಸ ಕೊವಿಡ್ ಪ್ರಕರಣ ಪತ್ತೆ , 496 ಮಂದಿ ಸಾವು

Covid 19:ಭಾರತವು ಗುರುವಾರ ಕೊವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ತನ್ನ ಅರ್ಹ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ಪೂರೈಸಿದೆ. ಇಲ್ಲಿಯವರೆಗೆ ದೇಶಾದ್ಯಂತ 61.10 ಕೋಟಿ ಕೊವಿಡ್ ಲಸಿಕೆಗಳನ್ನು ನೀಡಲಾಗಿದೆ.

Coronavirus cases in India: 44,658 ಹೊಸ ಕೊವಿಡ್ ಪ್ರಕರಣ ಪತ್ತೆ , 496 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 27, 2021 | 10:46 AM

ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 44,658 ಹೊಸ ಕೊವಿಡ್ -19 ಪ್ರಕರಣಗಳು ಮತ್ತು 496 ಸಾವುಗಳು ವರದಿಯಾಗಿವೆ. ದೇಶದಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 3,26,03,188 ಕ್ಕೆ ತಲುಪಿದ್ದು ಸಾವಿನ ಸಂಖ್ಯೆ 4,36,861 ಕ್ಕೆ ಏರಿಕೆಯಾಗಿದೆ. ಭಾರತವು ಗುರುವಾರ ಕೊವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ತನ್ನ ಅರ್ಹ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ಪೂರೈಸಿದೆ. ಇಲ್ಲಿಯವರೆಗೆ ದೇಶಾದ್ಯಂತ 61.10 ಕೋಟಿ ಕೊವಿಡ್ ಲಸಿಕೆಗಳನ್ನು ನೀಡಲಾಗಿದೆ.

ಏತನ್ಮಧ್ಯೆ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ವೇರಿಯಂಟ್ ಪ್ರಕರಣಗಳ ದೃಷ್ಟಿಯಿಂದ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್ಎಂಸಿ) ಗುರುವಾರ ನಗರದಲ್ಲಿ ಕೊರೊನಾವೈರಸ್ ಧನಾತ್ಮಕ ಪರೀಕ್ಷೆ ಮಾಡುವ ಪ್ರತಿಯೊಬ್ಬ ರೋಗಿಗೆ ಸಾಂಸ್ಥಿಕ ಸಂಪರ್ಕತಡೆಯನ್ನು (institutional quarantine) ಅಥವಾ ಆಸ್ಪತ್ರೆಗೆ ಸೇರಿಸುವುದನ್ನು ಕಡ್ಡಾಯಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಮುನ್ಸಿಪಲ್ ಕಮಿಷನರ್ ರಾಧಾಕೃಷ್ಣನ್ ಬಿ ಈ ಕುರಿತು ಆದೇಶ ಹೊರಡಿಸಿದ್ದಾರೆ ಮತ್ತು ಎಲ್ಲಾ ವಲಯ ಆಯುಕ್ತರಿಗೆ ಕೊರೊನವೈರಸ್ ಪರೀಕ್ಷೆ ನಡೆಸುವ ರೋಗಿಗಳನ್ನು ಸಾಂಸ್ಥಿಕ ಕ್ವಾರಂಟೈನ್ ಅಡಿಯಲ್ಲಿ ಇರಿಸಲು ಅಥವಾ ಅವರ ಆಸ್ಪತ್ರೆಗೆ ದಾಖಲಾಗುವಂತೆ ಖಚಿತಪಡಿಸಿಕೊಳ್ಳಲು ಎನ್ಎಂಸಿ ಪ್ರಕಟಣೆ ತಿಳಿಸಿದೆ.

ಸತತ ಎರಡನೇ ದಿನ ಕೇರಳದಲ್ಲಿ ಗುರುವಾರ 30,000 ಹೊಸ ಕೊವಿಡ್ -19 ಸೋಂಕುಗಳನ್ನು ವರದಿ ಮಾಡಿದೆ. ರಾಜ್ಯ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 30,007 ಕೊರೊನಾವೈರಸ್ ಪ್ರಕರಣಗಳು, 162 ಸಾವುಗಳು ಮತ್ತು 18,997 ಚೇತರಿಕೆಗಳನ್ನು ದಾಖಲಿಸಲಾಗಿದೆ. ಸಕ್ರಿಯ ಪ್ರಕರಣಗಳು 1,81,209ರಷ್ಟಿದೆ. ಕಳೆದ ಒಂದು ದಿನದಲ್ಲಿ ಒಟ್ಟು 1,66,397 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪರೀಕ್ಷಾ ಧನಾತ್ಮಕ ದರವು ಶೇ 18.03 ಆಗಿದೆ.

ಕಳೆದ ವಾರ ಕೇರಳದಲ್ಲಿ ಶೇ. 58.4 ರಷ್ಟು ಹೊಸ ಕೊವಿಡ್ ಪ್ರಕರಣಗಳಿವೆ ಎಂದು ತಿಳಿಸಿದ ಆರೋಗ್ಯ ಸಚಿವಾಲಯ ಗುರುವಾರ ದಕ್ಷಿಣ ರಾಜ್ಯದಲ್ಲಿ ಈಗ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ ಎಂದು ಹೇಳಿದೆ. ಪ್ರಸ್ತುತ ಭಾರತದ 41 ಜಿಲ್ಲೆಗಳು ವಾರಕ್ಕೆ 10 ಪ್ರತಿಶತಕ್ಕಿಂತ ಹೆಚ್ಚಿನ ಧನಾತ್ಮಕ ದರವನ್ನು ವರದಿ ಮಾಡುತ್ತಿವೆ ಎಂದು ಸಚಿವಾಲಯ ಹೇಳಿದೆ.

ಶೇ 50 ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ ಭಾರತವು ಗುರುವಾರ ಕೊವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ತನ್ನ ಅರ್ಹ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ನೀಡಿದ್ದು ದೇಶಾದ್ಯಂತ 61.10 ಕೋಟಿ ಲಸಿಕೆಗಳನ್ನು ನೀಡಿದೆ. ಸರ್ಕಾರದ ಪ್ರಕಾರ 2020 ರ ಯೋಜಿತ ಮಧ್ಯ ವರ್ಷದ ಎಣಿಕೆಯ ಆಧಾರದ ಮೇಲೆ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ದೇಶದ ಒಟ್ಟು ಜನಸಂಖ್ಯೆಯು ಸರಿಸುಮಾರು 94 ಕೋಟಿ ಆಗಿದೆ . ಗುರುವಾರ ಭಾರತವು 47.29 ಕೋಟಿ ಮೊದಲ ಡೋಸ್‌ಗಳ ನೀಡಿದೆ. ಇದು ವಯಸ್ಕ ಜನಸಂಖ್ಯೆಯ 50.30 ರಷ್ಟು.  ದಿನನಿತ್ಯದ ವ್ಯಾಕ್ಸಿನೇಷನ್‌ಗಳು ಆಗಸ್ಟ್‌ನಲ್ಲಿ ಸರಾಸರಿ 52.16 ಲಕ್ಷ ಡೋಸ್‌ಗಳನ್ನು ಹೊಂದಿದ್ದು, ಜುಲೈನಲ್ಲಿ 43.41 ಲಕ್ಷ ಡೋಸೇಜ್‌ಗಳನ್ನು ನೀಡಲಾಗಿದೆ.

ಇದನ್ನೂ ಓದಿ: ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಡೋಸ್ ಕೊವಿಡ್ ಲಸಿಕೆ ನೀಡಲು ಕೇಂದ್ರ ಒಪ್ಪಿದೆ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಸಂದಿಗ್ಧತೆಯಿಂದ ಪಾರು ಮಾಡಲು ಪೊಲೀಸರಿಗೆ ಶಕ್ತಿ ಕೊಡುವಂತೆ ಪ್ರಾರ್ಥಿಸಿದ್ದೇನೆ – ತಾಯಿ ಚಾಮುಂಡಿ ಸನ್ನಿಧಿಯಲ್ಲಿ ಗೃಹ ಸಚಿವ ಜ್ಞಾನೇಂದ್ರ

(India records 44,658 new Covid-19 cases and 496 deaths in the last 24 hours as per health ministry)

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ